ಉಡುಪಿ: ಜ. 4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ

Spread the love

ಉಡುಪಿ: ಜ. 4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ

ಉಡುಪಿ: ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ನಾಲ್ಕನೆ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 4 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ.

ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಮತ್ತು 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಲಸಿಕಾ ಡೋಸ್ (ಬೂಸ್ಟರ್ ಡೋಸ್) ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕಾಕರಣವನ್ನು ಖಚಿತಪಡಿಸಿಕೊಂಡು ಮತ್ತು ಲಸಿಕೆಯನ್ನು ನಿಗಧಿಪಡಿಸಿಕೊಂಡು ಲಸಿಕೆ ಪಡೆಯುವಂತೆ ಹಾಗೂ ಕೋವಿಶೀಲ್ಡ್ ಲಸಿಕೆಯು ಲಭ್ಯವಿರುವುದಿಲ್ಲ. ಲಸಿಕೆ ಬಂದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


Spread the love

Leave a Reply

Please enter your comment!
Please enter your name here