
ಉಡುಪಿ: ತಂದೆಯನ್ನು ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
ಉಡುಪಿ: ಮೂರು ವರ್ಷದ ಹಿಂದೆ ತಂದೆಯನ್ನು ಕೊಂದ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶ ದಿನೇಶ್ ಹೆಗ್ಡೆ ಆದೇಶಿಸಿದ್ದಾರೆ.
ಪೆರಂಪಳ್ಳಿ ಭಂಡಾರ ಮನೆಯ ಪ್ರಜೋತ್ ಶೆಟ್ಟಿ (50) ಜೀವಿತಾವಧಿ ಶಿಕ್ಷೆಗೆ ಗುರಿಯಾದ ಆರೋಪಿ.
2020ರ ಜ.13ರಂದು ಮದ್ಯಪಾನ ಮಾಡಲು ಹಣ ನೀಡಲಿಲ್ಲ ಎಂದು ಹಾಗೂ ಆಸ್ತಿಯಲ್ಲಿ ಪಾಲು ಕೊಡದ ಕಾರಣಕ್ಕೆ ತಂದೆ ಮಹಾಬಲ ಶೆಟ್ಟಿ ಅವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡು ಮಹಾಬಲ ಶೆಟ್ಟಿ ಮೃತಪಟ್ಟಿದ್ದರು.
ಅಂದಿನ ಮಣಿಪಾಲ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 25 ಸಾಕ್ಷಿಗಳ ವಿಚಾರಣೆ ನಡೆದಿತ್ತು.
35 ಸಾಕ್ಷಿಗಳಲ್ಲಿ 25 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದೆ. ಆರೋಪಿಗೆ ಜೀವಿತಾವಧಿ ಶಿಕ್ಷೆ ಮತ್ತು 10,000 ರೂ. ದಂಡ ಹಾಗು ತಾಯಿಗೆ ಹೊಡೆದ ಪ್ರಕರಣಕ್ಕೆ ಸಂಬಂಧಿಸಿ ಮೂರು ತಿಂಗಳ ಸಾದ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಾಸಿಕ್ಯೂಶನ್ ಪರ ಸರಕಾರಿ ಅಭಿಯೋಜಕ ಜಯರಾಂ ಶೆಟ್ಟಿ ವಾದಿಸಿದ್ದಾರೆ.