ಉಡುಪಿ: ತಂದೆಯನ್ನು ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

Spread the love

ಉಡುಪಿ: ತಂದೆಯನ್ನು ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
 

ಉಡುಪಿ: ಮೂರು ವರ್ಷದ ಹಿಂದೆ ತಂದೆಯನ್ನು ಕೊಂದ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶ ದಿನೇಶ್‌ ಹೆಗ್ಡೆ ಆದೇಶಿಸಿದ್ದಾರೆ.

ಪೆರಂಪಳ್ಳಿ ಭಂಡಾರ ಮನೆಯ ಪ್ರಜೋತ್‌ ಶೆಟ್ಟಿ (50) ಜೀವಿತಾವಧಿ ಶಿಕ್ಷೆಗೆ ಗುರಿಯಾದ ಆರೋಪಿ.

35 ಸಾಕ್ಷಿಗಳಲ್ಲಿ 25 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದೆ. ಆರೋಪಿಗೆ ಜೀವಿತಾವಧಿ ಶಿಕ್ಷೆ ಮತ್ತು 10,000 ರೂ. ದಂಡ ಹಾಗು ತಾಯಿಗೆ ಹೊಡೆದ ಪ್ರಕರಣಕ್ಕೆ ಸಂಬಂಧಿಸಿ ಮೂರು ತಿಂಗಳ ಸಾದ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಾಸಿಕ್ಯೂಶನ್‌ ಪರ ಸರಕಾರಿ ಅಭಿಯೋಜಕ ಜಯರಾಂ ಶೆಟ್ಟಿ ವಾದಿಸಿದ್ದಾರೆ.


Spread the love