ಉಡುಪಿ: ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

Spread the love

ಉಡುಪಿ: ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು LE-5ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಸಾಕಷ್ಟು ಮುಂಚಿತವಾಗಿ AE-5 ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದು, ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆಯನ್ನು ನೀಡುವ ಬಗ್ಗೆ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಸ್ಫೋಟಕ ಕಾಯಿದೆ ಮತ್ತು ನಿಯಮ 2008 ರ ಶೆಡ್ಯೂಲ್- IV ರಡಿಯಲ್ಲಿ ಜಿಲ್ಲಾ ವ್ಯಾಪ್ತಿಯ ಈಗಾಗಲೇ ಸಮಿತಿಯು ನಿಗದಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ, ಅರ್ಜಿಗಳನ್ನು ಜಿಲ್ಲಾಧಿಕಾರಿಯವರ ಕಚೇರಿಯಿಂದ ಅಥವಾ ಆನ್ಲೈನ್ LSDA Portal ನಲ್ಲಿ ಪಡೆದು ಅಕ್ಟೋಬರ್ 10 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ 300 ರೂ. ಪರಿಶೀಲನಾ ಶುಲ್ಕವನ್ನು ಹಾಗೂ ಪರವಾನಿಗೆ ಮಂಜೂರು ಮಾಡುವ ಸಂದರ್ಭದಲ್ಲಿ 600 ರೂ. ಪರವಾನಿಗೆ ಶುಲ್ಕವನ್ನು ಪಾವತಿಸಬೇಕು.

ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ AE-5 ರಲ್ಲಿ ಸಲ್ಲಿಸಬೇಕಾಗಿದ್ದು, ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ ನೀಲಿ ನಕ್ಷೆ, ಅರ್ಜಿದಾರರ ಭಾವಚಿತ್ರ, ಪ್ರಸ್ತಾಪಿತ ಜಮೀನಿನ ಪಹಣಿ, ಖಾಸಗಿ ಜಮೀನಾಗಿದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ (100 ರೂ.ಸ್ಟಾಂಪ್ ಪೇಪರ್), ಸರಕಾರ ಜಾಗವಾಗಿದ್ದಲ್ಲಿ ಜಮೀನು ಯಾವ ಇಲಾಖೆಯ ಸುಪರ್ದಿಯಲ್ಲಿದೆಯೋ ಆ ಇಲಾಖೆಯ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು.

ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಅಗ್ನಿಶಾಮಕ ಇಲಾಖೆ, ಪೊಲೀಸ್ ಇಲಾಖೆ, ತಹಶೀಲ್ದಾರರ ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಂದ ಪಡೆದ ನಿರಾಕ್ಷೇಪಣಾ ಪತ್ರಗಳನ್ನು AE-5 ನಮೂನೆ, ಪ್ರಸ್ತಾವಿತ ಜಮೀನಿನ ನಕ್ಷೆ, ಇತ್ತೀಚಿನ ಪಹಣಿ ಪತ್ರ ದಾಖಲೆಗಳು ಹಾಗೂ ತಾಲೂಕು ಮಟ್ಟದ ಸಮಿತಿಯಿಂದ ಪಡೆದಿರುವ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು. LSDA Portal ನ ನಮೂನೆಯಲ್ಲಿರುವ ಎಲ್ಲಾ ಕಲಂಗಳನ್ನು ವಿವರದೊಂದಿಗೆ ಭರ್ತಿ ಮಾಡಬೇಕು.

ತಾಲೂಕು ಮಟ್ಟದ ಸಮಿತಿಯು ನಿಗದಿಪಡಿಸುವ ಸಾರ್ವಜನಿಕ ವಸತಿ ಹಾಗೂ ಅಂಗಡಿ ಇರುವ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಾತ್ರ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಬಹುದಾಗಿದ್ದು, ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಬಂದಲ್ಲಿ ದಿ ಎಕ್ಸ್ಪ್ಲೋಸಿವ್ ಆಕ್ಟ್ 1884 ಸೆಕ್ಷನ್ 84 ಹಾಗೂ ಎಕ್ಸ್ಪ್ಲೋಸಿವ್ ರೂಲ್ಸ್ 2008 ಕಾಯಿದೆ/ ನಿಯಮಾವಳಿಗಳಿಗೆ ಒಳಪಟ್ಟು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪರವಾನಿಗೆ ಮಂಜೂರು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


Spread the love
Subscribe
Notify of

0 Comments
Inline Feedbacks
View all comments