ಉಡುಪಿ, ದ.ಕನ್ನಡ, ಶಿವಮೊಗ್ಗದಲ್ಲಿ ಖಾಸಗಿ ಬಸ್ ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

Spread the love

ಉಡುಪಿ, ದ.ಕನ್ನಡ, ಶಿವಮೊಗ್ಗದಲ್ಲಿ ಖಾಸಗಿ ಬಸ್ ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ಉಡುಪಿ: ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಆದರೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಹೆಚ್ಚಿರುವ ಕಾರಣ ಈ ಮೂರು ಜಿಲ್ಲೆಯಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದಿದ್ದಾರೆ.


Spread the love