ಉಡುಪಿ ನಗರಸಭೆಯಲ್ಲಿ ಸಂವಿಧಾನ ಪೀಠಿಕೆ ಪಠಣ

Spread the love

ಉಡುಪಿ ನಗರಸಭೆಯಲ್ಲಿ ಸಂವಿಧಾನ ಪೀಠಿಕೆ ಪಠಣ

ಉಡುಪಿ: ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯಾದ್ಯಂತ ಹಮ್ಮಿಕೊಂಡಿದ್ದು ಇಂದು ಉಡುಪಿ ನಗರಸಭೆ ಕಚೇರಿಯ ಮುಂಭಾಗದಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಪೌರಾಯುಕ್ತರಾದ ರಾಯಪ್ಪ, ಉಡುಪಿ ನಗರಸಭೆಯ ವಿಪಕ್ಷ ನಾಯಕರಾದ ರಮೇಶ್ ಕಾಂಚನ್, ಮಾಜಿ ಉಡುಪಿ ನಗರಸಭೆಯ ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ್, ಮಾಜಿ ಸ್ಥಾಯೀ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಉಡುಪಿ ನಗರಸಭೆಯ ಸದಸ್ಯರು, ಉಡುಪಿ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here