ಉಡುಪಿ: ನೆರೆಪೀಡಿತ ಪ್ರದೇಶಗಳಿಗೆ ಡಿಸಿ ಜಗದೀಶ್, ಎಸ್ಪಿ ವಿಷ್ಣುವರ್ಧನ್ ಭೇಟಿ

Spread the love

ಉಡುಪಿ: ನೆರೆಪೀಡಿತ ಪ್ರದೇಶಗಳಿಗೆ ಡಿಸಿ ಜಗದೀಶ್, ಎಸ್ಪಿ ವಿಷ್ಣುವರ್ಧನ್ ಭೇಟಿ

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು ನದಿ ತೀರದ ಪ್ರದೇಶಗಳಲ್ಲಿ ನೆರೆ ವಾತಾವರಣ ಏರ್ಪಟ್ಟಿದ್ದು, ನೆರೆ ಪೀಡಿತ ಪ್ರದೇಶಗಳಿಗೆ ಭಾನುವಾರ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೈಂದೂರು ತಾಲೂಕಿನ ನಾವುಂದ, ಬಡಾಕೆರೆ, ಬ್ರಹ್ಮಾವರ ತಾಲೂಕಿನ ಉಪ್ಪೂರು ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅಲ್ಲಿನ ನಿವಾಸಿಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಯಾವುದೇ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಂಪರ್ಕ ಮಾಡುವಂತೆ ತಿಳಿಸಿದರು. ಅಲ್ಲದೆ ಸ್ಥಳೀಯ ಜಿಲ್ಲಾ ಪಂಚಾಯತಿ ಸದಸ್ಯರು, ತಹಶೀಲ್ದಾರ್ ಜೊತೆ ತೆಗೆದುಕೊಂಡಿರುವ ಮುಂಜಾಗೃತ ಕ್ರಮಗಳ ಬಗ್ಗೆ ಚರ್ಚೆ ನಡೆಸಿ ಅಗತ್ಯ ಬಿದ್ದಲ್ಲಿ ನೆರೆ ಪೀಡಿತ ಪ್ರದೇಶಗಳಿಂದ ಜನರನ್ನು ಶಿಫ್ಟ್ ಮಾಡಲು ಸೂಚನೆ ನೀಡಿದರು.


Spread the love