Home Mangalorean News Kannada News ಉಡುಪಿ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ

ಉಡುಪಿ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ

Spread the love

ಉಡುಪಿ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿ ವಿಚಾರಣೆ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಇಂದು ನಡೆಯಿತು.

ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಹಾಯಕ ಸರಕಾರಿ ಅಭಿಯೋಜಕಿ ಮೋಹಿಣಿ ಸಮಯ ಕೇಳಿದರು. ಇದೇ ಸಂದರ್ಭ ಎಪಿಪಿಗೆ ಸಹಕರಿಸಲು ಅವಕಾಶ ಕೋರಿ, ದೂರುದಾರ ಪರ ವಕೀಲ ಶಂಭು ಶರ್ಮ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಅರ್ಜಿಯ ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದರು ಎಂದು ತಿಳಿದುಬಂದಿದೆ.


Spread the love

Exit mobile version