ಉಡುಪಿ: ಪತ್ರಕರ್ತರ ಸಂಘದಿಂದ ಗೌರವ ಸಮರ್ಪಣಾ ಕಾರ್ಯಕ್ರಮ

Spread the love

ಉಡುಪಿ: ಪತ್ರಕರ್ತರ ಸಂಘದಿಂದ ಗೌರವ ಸಮರ್ಪಣಾ ಕಾರ್ಯಕ್ರಮ

ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯ ದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಜು.8 ರಂದು ನಡೆದ ಪತ್ರಕರ್ತರ ಮಕ್ಕಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ದಾನಿಗಳು ಹಾಗೂ ಶ್ರಮಿಸಿದ ಸಂಘದ ಸದಸ್ಯರುಗಳಿಗೆ ಗೌರವಾರ್ಪಣಾ ಕಾರ್ಯಕ್ರಮವನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಮಾಜ ಸೇವಕ, ಉದ್ಯಮಿ ಕೃಷ್ಣಮೂರ್ತಿ ಆಚಾರ್ಯ, ಪುತ್ತಿಗೆ ಮಠದ ಮಹಿತೋಷ್ ಆಚಾರ್ಯ, ಉಡುಪಿ ಕೃಷ್ಣ ಮಠದ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಐಎಂಎ ಉಡುಪಿ ಕರಾವಳಿ ಶಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಕೇಶವ ನಾಯಕ್, ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಎಂ.ಶರೀಫ್, ಉದ್ಯಮಿ ಮೋಹನ್ ಭಟ್, ಪದ್ಮಶಾಲಿ ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ ಇಂದ್ರಾಳಿ ಅವರನ್ನು ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳು ಮತ್ತು ಸದಸ್ಯರುಗಳನ್ನು ಗೌರವಿಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಸಹಕರಿಸಿದವರಿಗೆ ಕೃತಜ್ಞತೆ ಸಮರ್ಪಿಸಿದರು. ದಾನಿಗಳ ಪರವಾಗಿ ಕೃಷ್ಣಮೂರ್ತಿ ಆಚಾರ್ಯ ಹಾಗೂ ಸದಸ್ಯರ ಪರವಾಗಿ ಶಶಿಧರ ಮಾಸ್ತಿಬೈಲು ಹಾಗೂ ರಾಕೇಶ್ ಕುಂಜೂರು ಅನಿಸಿಕೆ ವ್ಯಕ್ತಪಡಿಸಿದರು.

ಸಂಘದ ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ದಾನಿಗಳ ಪಟ್ಟಿ ವಾಚಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.


Spread the love