ಉಡುಪಿ: ಪತ್ರಿಕಾ ದಿನಾಚರಣೆ ಪ್ರಯುಕ್ತ ಪತ್ರಕರ್ತರ ಆರೋಗ್ಯ ತಪಾಸಣೆ

Spread the love

ಉಡುಪಿ: ಪತ್ರಿಕಾ ದಿನಾಚರಣೆ ಪ್ರಯುಕ್ತ ಪತ್ರಕರ್ತರ ಆರೋಗ್ಯ ತಪಾಸಣೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹ ಯೋಗದೊಂದಿಗೆ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಪತ್ರಕರ್ತರ ಆರೋಗ್ಯ ತಪಾಸಣಾ ಶಿಬಿರವನ್ನು ಗುರುವಾರ ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಮಾತನಾಡಿ, ಇಂದಿನ ಕೊರೋನಾ ಕಾಲಘಟ್ಟದಲ್ಲಿ ಮಾನವೀಯ ವೌಲ್ಯ ಹಾಗೂ ಸಂಬಂಧದೊಂದಿಗೆ ಇನ್ನಷ್ಟು ಜನಪರ ಕೆಲಸಗಳು ವೈದ್ಯರು ಹಾಗೂ ಪತ್ರಕರ್ತರಿಂದ ಆಗಬೇಕು. ಕೋವಿಡ್ ಸಂಕಷ್ಟ ಸಮಯದಲ್ಲಿ ಜನರನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ಪತ್ರಕತರ್ಕರ ಸೇವೆ ಅಭಿನಂದನೀಯ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ವೈದ್ಯೆ ಡಾ.ರೋಶಿನಿ ಪೂಂಜಾ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.

ಶಿಬಿರದಲ್ಲಿ ಉಡುಪಿ ಜಿಲ್ಲೆಯ 50ಕ್ಕೂ ಅಧಿಕ ಪತ್ರಕರ್ತರ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಸಲಹೆಗಳನ್ನು ವೈದ್ಯರು ನೀಡಿದರು


Spread the love