
ಉಡುಪಿ ಪರ್ಯಾಯಕ್ಕೆ ರೂ. 50 ಕೋಟಿ ವಿಶೇಷ ಅನುದಾನ ಬಿಡುಗಡೆಗೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ
ಉಡುಪಿ: ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಮಾಡಿ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು.
2024 ರ ಜನವರಿಯಲ್ಲಿ ಜರುಗಲಿರುವ ಪರ್ಯಾಯ ಮಹೋತ್ಸವ ಅಂಗವಾಗಿ ನಗರದ ಮೂಲ ಸೌಕರ್ಯ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನ ಬಿಡುಗಡೆಗೆ ಮನವಿ ಮಾಡಿದರು.
ಮನವಿಯಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ, ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಗೆ ಅನುದಾನ ಬಿಡುಗಡೆ, ಉಡುಪಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಕೃಷಿ ಕಾಲೇಜು ಪ್ರಾರಂಭ, ಬಜೆಟ್ ನಲ್ಲಿ ಘೋಷಿಸಿರುವ ಮೀನುಗಾರಿಕೆಗೆ ಡೀಸೆಲ್ ಸಬ್ಸಿಡಿ, ನಾಡದೋಣಿ ಸೀಮೆಎಣ್ಣೆ ಪೂರೈಕೆ, ಮಹಿಳಾ ಮೀನುಗಾರರಿಗೆ ಶೂನ್ಯ ಬಡ್ಡಿದರದ ಸಾಲ ಯೋಜನೆಗಳ ಶೀಘ್ರ ಅನುಷ್ಠಾನ, ಕಡಲು ಕೊರೆತಕ್ಕೆ ಶಾಶ್ವತ ಪರಿಹಾರ, ಪ್ರಾಕೃತಿಕ ವಿಕೋಪ ನಿರ್ವಹಣೆಗೆ ವಿಶೇಷ ಅನುದಾನ, ಗ್ರಾಮೀಣ ಭಾಗದಲ್ಲಿ ಸರಕಾರಿ ಬಸ್ ಗಳ ಸಂಚಾರ ಹೆಚ್ಚಳ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೂತನ ವಸತಿ ನಿಲಯಗಳ ಸ್ಥಾಪನೆ ಮತ್ತಿತರ ಬೇಡಿಕೆಗಳ ಪತ್ರವನ್ನು ನೀಡಿ ಬೇಡಿಕೆಗಳನ್ನು ಶೀಘ್ರ ಈಡೇರಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.