
Spread the love
ಉಡುಪಿ: ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವು
ಉಡುಪಿ : ನಗರದ ಪುತ್ತಿಗೆ ಮಠದಲ್ಲಿ ಲಕ್ಷಾಂತರ ರು. ಮೌನ್ಯದ ಚಿನ್ನದ ಗಿಂಡಿ ಕಳವಾಗಿರುವ ಕುರಿತು ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ
ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆಯ ಸಂದರ್ಭದಲ್ಲಿ 6 ಜನ ಮಠದ ವಿದ್ಯಾರ್ಥಿಗಳು ಮತ್ತು ಪುರೋಹಿತರು ಬಂದು ಹೋಗಿದ್ದು, ಪೂಜೆಯ ನಂತರ ಪೂಜಾ ಸಾಮಾಗ್ರಿಗಳನ್ನು ತೆಗೆದು ಇಡುವಾಗ 7 ಲಕ್ಷ ರೂಪಾಯಿ ಮೌಲ್ಯದ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿದ್ದು ಗಮನಕ್ಕೆ ಬಂದಿದೆ.
ಮಠದ ವ್ಯವಸ್ಥಾಪಕರಾದ ವಿಷ್ಣುಮೂರ್ತಿ ಅವರು ಪೂಜೆಯ ನಂತರ ಸಾಮಾಗ್ರಿಗಳನ್ನು ತೆಗೆದಿಡುವಾಗ ಪೂಜೆಗೆ ಬಳಸುವ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿದ್ದು, ತಿಳಿದಿದೆ.
ಈ ಕುರಿತು ನಗರ ಠಾಣೆಗೆ ದೂರು ನೀಡಲಾಗಿದ್ದು, ಈ ಗಿಂಡಿಯ ಅಂದಾಜು ಬೆಲೆ 7 ಲಕ್ಷ ರು. ಆಗಬಹುದು ಎಂದು ವಿಷ್ಣುಮೂರ್ತಿ ಅವರು ನಗರ ಠಾಣೆಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.
Spread the love