ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆ, ಸಮಯಪ್ರಜ್ಞೆ – ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ರಕ್ಷಣೆ

Spread the love

ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆ, ಸಮಯಪ್ರಜ್ಞೆ – ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ರಕ್ಷಣೆ

ಉಡುಪಿ:  ನಗರ ಠಾಣೆಯ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದಾಗಿ ಅತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೋರ್ವನನ್ನು ರಕ್ಷಣೆ ಮಾಡಿದ ಘಟನೆ ಗುರುವಾರ ಸಂಭವಿಸಿದೆ.

ರಕ್ಷಣೆಗೆ ಒಳಗಾದ ವ್ಯಕ್ತಿಯನ್ನು ರೋಹನ್‌ ರಾಜೇಶ ಜತ್ತನ್ನ ಎಂದು ಗುರುತಿಸಲಾಗಿದೆ.

ಉಡುಪಿ ನಗರದ ಖಾಸಗಿ ಲಾಡ್ಜ್‌ ನಲ್ಲಿ ಕೌಟಂಬಿಕ ಸಮಸ್ಯೆಯಿಂದ ಖಿನ್ನತೆಗೆ ಒಳಗಾದ ರೋಹನ್‌ ರಾಜೇಶ್‌ ಜತ್ತನ್ನ ಎಂಬ ವ್ಯಕ್ತಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಬಳಿಕ ಆತ ತನ್ನ ಮಂಗಳೂರಿನ ಸ್ನೇಹಿತ ಆದಿತ್ಯ ಎಂಬಾತನಿಗೆ ಕರೆ ಮಾಡಿದ್ದು, ಆದಿತ್ಯ ಕೂಡಲೇ ಮಂಗಳೂರು ಪೊಲೀಸ್‌ ಕಂಟ್ರೋಲ್‌ ರೂಮಿಗೆ ಮಾಹಿತಿ ನೀಡಿದ್ದನು. ಮಂಗಳೂರು ಪೋಲಿಸ್‌ ಕಂಟ್ರೋಲ್‌ ರೂಮಿನಿಂದ ಉಡುಪಿ ಪೊಲೀಸರಿಗೆ ಮಾಹಿತಿ ಬಂದಿದ್ದು ಕೂಡಲೇ ಉಡುಪಿ ನಗರಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಖಾಸಗಿ ಲಾಡ್ಜಿಗೆ ದೌಡಿಯಿಸಿದ ಪೊಲೀಸರು ಅರೆ ಪ್ರಜ್ಞಾವಸ್ಥೆಯಲ್ಲಿದ್ದ ರೋಹನ್‌ ಅವರನ್ನು ಆಸ್ಪತ್ರೆಗೆ ಕೊಂಡೊಯ್ದು ಸೂಕ್ತ ಚಿಕಿತ್ಸೆ ನೀಡಿದ್ದು ಅಪಾಯದಿಂದ ಪಾರಾಗಿದ್ದಾನೆ.

ಪೊಲೀಸರ ಸಮಯ ಪ್ರಜ್ಞೆ ಮತ್ತು ಕರ್ತವ್ಯ ಪ್ರಜ್ಞೆಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ


Spread the love