ಉಡುಪಿ ಬಿಶಪ್ ಭೇಟಿ ಮಾಡಿ ಆಶೀರ್ವಾದ ಪಡೆದ ಜೆಪಿ ಹೆಗ್ಡೆ

Spread the love

ಉಡುಪಿ ಬಿಶಪ್ ಭೇಟಿ ಮಾಡಿ ಆಶೀರ್ವಾದ ಪಡೆದ ಜೆಪಿ ಹೆಗ್ಡೆ

ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಮಂಗಳವಾರ ಉಡುಪಿ ಶೋಕಮಾತಾ ಇಗರ್ಜಿಗೆ ಭೇಟಿ ನೀಡಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ ಆಶೀರ್ವಾದ ಪಡೆದರು.

ಈ ವೇಳೆ ಧರ್ಮಾಪ್ರಾಂತ್ಯದ ಶ್ರೇಷ್ಠ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಉಡುಪಿ ಚರ್ಚಿನ ಧರ್ಮಗುರು ವಂ|ಚಾರ್ಲ್ಸ್ ಮಿನೇಜಸ್, ಕಾಂಗ್ರೆಸ್ ನಾಯಕರಾದ ಎಮ್ ಎ ಗಫೂರ್, ಕೃಷ್ಣಮೂರ್ತಿ ಆಚಾರ್ಯ, ಅಮೃತಾ ಕೃಷ್ಣಮೂರ್ತಿ, ಪ್ರಕಾಶ್ ಅಂದ್ರಾದೆ, ಪ್ರಶಾಂತ್ ಜತ್ತನ್ನ, ಸದಾಶಿವ ಕಟ್ಟೆಗುಡ್ಡೆ ಹಾಗೂ ಇತರರು ಉಪಸ್ಥಿತರಿದ್ದರು.


Spread the love

Leave a Reply