ಉಡುಪಿ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ಭೇಟಿ ಮಾಡಿದ ಶಾಸಕ ಯಶ್ಪಾಲ್ ಸುವರ್ಣ

Spread the love

ಉಡುಪಿ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ಭೇಟಿ ಮಾಡಿದ ಶಾಸಕ ಯಶ್ಪಾಲ್ ಸುವರ್ಣ

ಇಸ್ರೇಲ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ : ಯಶ್ ಪಾಲ್ ಸುವರ್ಣ

ಉಡುಪಿ: ಇಸ್ರೇಲ್ ಹಮಾಸ್ ಉಗ್ರರ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಇಸ್ರೇಲ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಆಪರೇಶನ್ ಅಜಯ್ ಮೂಲಕ ಭಾರತೀಯರನ್ನು ತಾಯ್ನಾಡಿಗೆ ಕರೆತರುತ್ತಿದೆ ಎಂದು ಉಡುಪಿ ಧರ್ಮ ಪ್ರಾಂತ್ಯದ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ರವರನ್ನು ಶಾಸಕ ಯಶ್ ಪಾಲ್ ಸುವರ್ಣ ಭೇಟಿ ಮಾಡಿ ಮಾತುಕತೆ ನಡೆಸಿದರು.

ಕರಾವಳಿ ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತ ಸಮುದಾಯದವರಾಗಿದ್ದಾರೆ.

ಈಗಾಗಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರು ವಿದೇಶಾಂಗ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು.

ಉಡುಪಿ ಶಾಸಕರ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಿದ್ದು, ದೆಹಲಿಯ ರಾಯಭಾರಿ ಕಚೇರಿಯ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸಹಕಾರ ನೀಡುತ್ತಿರುವ ಬಗ್ಗೆ ಧರ್ಮಾಧ್ಯಕ್ಷರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಧರ್ಮಗುರುಗಳಾದ ಚಾರ್ಲ್ಸ್ ಮಿನೇಜಸ್, ಸಮುದಾಯದ ಪ್ರಮುಖರಾದ ರಾಜೇಶ್, ಆಲ್ವಿನ್ ಡಿಸೋಜ, ಡೆನಿಸ್ ಮಸ್ಕರೇನಸ್ , ಶೆರ್ಲಿನ್, ನಗರ ಬಿಜೆಪಿ ಕಾರ್ಯದರ್ಶಿ ದಿನೇಶ್ ಅಮೀನ್, ಮಾಜಿ ನಗರ ಸಭಾ ಸದಸ್ಯರಾದ ಪ್ರಶಾಂತ್ ಭಟ್, ಶ್ರೀಮತಿ ಅರುಣಾ ಪೂಜಾರಿ ಉಪಸ್ಥಿತರಿದ್ದರು.


Spread the love