ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ ರಕ್ತದಾನ ಶಿಬಿರಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

Spread the love

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ ರಕ್ತದಾನ ಶಿಬಿರಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ಉಡುಪಿ: ದಾನಗಳಲ್ಲಿ ಅತ್ಯಂತ ಶ್ರೇಷ್ಠದಾನ ರಕ್ತದಾನವಾಗಿದ್ದು, ದಾನವಾಗಿ ನೀಡುವ ರಕ್ತದಿಂದ ಒಬ್ಬರ ಜೀವನವನ್ನು ಉಳಿಸಬಹುದು ಮಾತ್ರವಲ್ಲ ರಕ್ತದಾನಿಯು ತನ್ನ ಆರೋಗ್ಯದ ಕ್ಷಮತೆಯನ್ನು ಹೆಚ್ಚಿಸಿಕೊಳ್ಳಬಹುದು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು.

ಅವರು ಗುರುವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಮತ್ತು ಉಡುಪಿ ಜಿಲ್ಲಾಸ್ಪತ್ರೆ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ತುರ್ತು ಸಂದರ್ಭದಲ್ಲಿ ರೋಗಿಗೆ ಜೀವ ಉಳಿಸಲು ರಕ್ತದಿಂದ ಮಾತ್ರ ಸಾಧ್ಯವಿದ್ದು, ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ರಕ್ತದ ಕೊರತೆಯಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದರು.

ಕಾರ್ಯಕ್ರಮದಲ್ಲಿ ಕ್ರೈಸ್ತ ಧರ್ಮಗುರು ವಂ|ವಿಲಿಯಂ ಮಾರ್ಟಿಸ್, ಜಿಲ್ಲಾ ರಕ್ತನಿಧಿ ವಿಭಾಗದ ಡಾ. ವೀಣಾ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕೆಪಿಸಿಸಿ ನಾಯಕರಾದ ಎಂ ಎ ಗಫೂರ್, ವೆರೋನಿಕಾ ಕರ್ನೆಲಿಯೊ, ನಾಯಕರಾದ ಭುಜಂಗ ಶೆಟ್ಟಿ, ಕೀರ್ತಿ ಶೆಟ್ಟಿ, ಯತೀಶ್ ಕರ್ಕೇರಾ, ರೋಶನಿ ಒಲಿವರ್, ನರಸಿಂಹ ಮೂರ್ತಿ, ಹಮ್ಮದ್ ಉಡುಪಿ, ಪ್ರಶಾಂತ್ ಪೂಜಾರಿ, ಮೀನಾಕ್ಷಿ ಮಾಧವ ಬನ್ನಂಜೆ, ಶರತ್ ಶೆಟ್ಟಿ, ಸಾಯಿರಾಜ್, ಕುಶಲ ಶೆಟ್ಟಿ, ಡಿಯೋನ್ ಡಿಸೋಜಾ ಹಾಗೂ ಇತರರು ಉಪಸ್ಥೀತರಿದ್ದರು.


Spread the love