ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ – ವಿವಿಧ ವಿಚಾರಗಳ ಬಗ್ಗೆ ಚರ್ಚೆ

Spread the love

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ – ವಿವಿಧ ವಿಚಾರಗಳ ಬಗ್ಗೆ ಚರ್ಚೆ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಹಾಗೂ ವಿವಿಧ ಘಟಕದ ಅಧ್ಯಕ್ಷರ ಸಮ್ಮುಖದಲ್ಲಿ ಮುಂಬರುವ ಲೋಕಸಭಾ ಚುನಾವಣೆ, ಉಡುಪಿ ನಗರಸಭೆ ಚುನಾವಣೆ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಬೂತ್ಗಳ ಸಮಿತಿ ರಚನೆ, ಪಕ್ಷ ಸಂಘಟನೆ, ಕರ್ನಾಟಕ ರಾಜ್ಯದ ವಿವಿಧ ನಿಗಮ ಮಂಡಳಿಗಳ ಸ್ಥಾನವನ್ನು ಕಾರ್ಯಕರ್ತರಿಗೆ ದೊರಕಿಸುವ ಬಗ್ಗೆ, ನಾಮನಿರ್ದೇಶಿತ ಸ್ಥಾನಗಳ ಬಗ್ಗೆ ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಅಧಿಕಾರಿಗಳು ಜನಸಾಮಾನ್ಯರ ಕಷ್ಟಕ್ಕೆ ಅತೀ ಶೀಘ್ರದಲ್ಲಿ ಸ್ಪಂದಿಸಬೇಕೆಂದು ಚರ್ಚಿಸಲಾಯಿತು.

ಈ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಾಯಕರಾದ ಪ್ರಸಾದ್ ರಾಜ್ ಕಾಂಚನ್, ದಿನೇಶ್ ಪುತ್ರನ್, ದಿವಾಕರ್ ಕುಂದರ್, ಕುಶಲ್ ಶೆಟ್ಟಿ, ಅಣ್ಣಯ್ಯ ಶೇರಿಗಾರ್, ಜ್ಯೋತಿ ಹೆಬ್ಬಾರ್, ಸದಾಶಿವ ಕಟ್ಟೆಗುಡ್ಡೆ, ಮೀನಾಕ್ಷಿ ಮಾಧವ ಬನ್ನಂಜೆ, ಸಂಧ್ಯಾ ತಿಲಕ್ ರಾಜ್, ನರಸಿಂಹಮೂರ್ತಿ, ಮಹಾಬಲ ಕುಂದರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಘಟಕದ ಅಧ್ಯಕ್ಷರಾದ ನವೀನ್ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಸುರೇಂದ್ರ ಆಚಾರ್ಯ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು ತಮ್ಮ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಸ್ವಾಗತಿಸಿದರು ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಮಾರ್ ಮಂಚಿ ಅವರು ಕಾರ್ಯಕ್ರಮ ನಿರೂಪಿಸಿ ನಂತರ ವಂದಿಸಿದರು.


Spread the love