
Spread the love
ಉಡುಪಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಪುತ್ರ ಸಹಿತ ಮೂವರು ಆರೋಪಿಗಳು ದೋಷಿ
ಉಡುಪಿ, : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಉಡುಪಿ ಇಂದ್ರಾಳಿಯ ಭಾಸ್ಕರ್ ಶೆಟ್ಟಿ(52)ಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದ್ದು, ಪತ್ನಿ, ಮಗ ಸಹಿತ ಮೂವರು ಆರೋಪಿಗಳು ದೋಷಿಗಳು ಎಂದು ಆದೇಶ ನೀಡಿದೆ.
ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ನ್ಯಾಯಾಲಯ ದೋಷಿಗಳೆಂದು ಘೋಷಿಸಿರುವ ಆರೋಪಿಗಳಾಗಿದ್ದಾರೆ. ಸಾಕ್ಷ್ಯನಾಶ ಆರೋಪಿ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿಗಳ ಶಿಕ್ಷೆ ಪ್ರಮಾಣವನ್ನು ಇಂದು ಮಧ್ಯಾಹ್ನ ನ್ಯಾಯಾಲಯದ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಪ್ರಕಟಿಸಲಿದ್ದಾರೆ.
ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ವಾದ ಮಂಡಿಸಿದ್ದಾರೆ.
Spread the love