ಉಡುಪಿ: ಮದ್ಯಪಾನ ಮಾಡಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು

Spread the love

ಉಡುಪಿ: ಮದ್ಯಪಾನ ಮಾಡಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು

ಉಡುಪಿ: ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನ ವಿರುದ್ದ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸುದರ್ಶನ ದೊಡ್ಡಮನಿ ಅವರು ಗುರುವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಖಾಸಗಿ ಬಸ್ಸೊಂದರ ಚಾಲಕ ಪ್ರಿನ್ಸ್ ಬೆನ್ನಿ ಎಂಬಾತ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕರ ರೀತಿಯಲ್ಲಿ ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಬಸ್ಸು ಚಲಾಯಿಸದ್ದು, ಆತನನ್ನು ತಪಾಸಣೆ ಮಾಡಿದಾಗಿ ಮದ್ಯ ಸೇವಿಸಿರುವುದು ದೃಢಪಟ್ಟಿದೆ

ಚಾಲಕ ಪ್ರಿನ್ಸ್ ಬೆನ್ನಿ ವಿರುದ್ದ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments