ಉಡುಪಿ:  ಮಹಿಳೆಯರ ಸಬಲೀಕರಣಕ್ಕೆ ಪೂರಕ ‘ಸಂಜೀವಿನಿ ಸಂತೆ’

Spread the love

ಉಡುಪಿ:  ಮಹಿಳೆಯರ ಸಬಲೀಕರಣಕ್ಕೆ ಪೂರಕ ‘ಸಂಜೀವಿನಿ ಸಂತೆ’

ಉಡುಪಿ: ಸ್ವಸಹಾಯ ಸಂಘಗಳ ಮಹಿಳೆಯರಿಗೆ ಸ್ಥಳೀಯವಾಗಿ ಉತ್ಪಾದಿಸಿ ಉತ್ಪನ್ನಗಳಿಗೆ ಮೌಲ್ಯವರ್ಧನೆ ನೀಡುವ ನಿಟ್ಟಿನಲ್ಲಿ ಮಧ್ಯವರ್ತಿಗಳಿಲ್ಲದೆ ನೇರವಾಗಿ ಗ್ರಾಹಕರಿಗೆ ತಲುಪಿಸಲು ಮತ್ತು ಸದ್ಯಸರ ಆದಾಯವನ್ನು ಹೆಚ್ಚಿಸಲು ಸೂಕ್ತ ಮಾರುಕಟ್ಟೆ ಮತ್ತು ಪ್ರದರ್ಶಕ್ಕೆ ಉತ್ತಮ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಉಡುಪಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವನಿ ಇವರ ಆಶ್ರಯದಲ್ಲಿ ಉಡುಪಿಯ ಬನ್ನಂಜೆ ಬಾಲ ಭವನ ಆವರಣದಲ್ಲಿ ಸಂಜೀವಿನಿ ಸಂತೆ ಆಯೋಜಿಸಲಾಗಿತ್ತು.

ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಅವರು ವಹಿಸಿ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಬಾಲಭವನ ಅಭಿವೃದ್ಧಿ ಅನುದಾನದಲ್ಲಿ ಮಾರುಕಟ್ಟೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸುಸಜ್ಜಿತ ಮೇಲ್ಚಾವಣಿಯನ್ನು ನಿರ್ಮಿಸಿ ಕೊಡುವ ಮೂಲಕ ಸಂಜೀವಿನಿ ಗುಂಪಿನ ಮಹಿಳೆಯರಿಗೆ ನೆರವು ನೀಡಿದ್ದಾರೆ.
ಬನ್ನಂಜೆ ಬಾಲಭವನ ಸಂಜೀವಿನಿ ಸಂತೆಗೆ ಸ್ವತಃ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೇಟಿ ನೀಡಿ ಖರೀದಿಸುವ ಮೂಲಕ ಪ್ರೋತ್ಸಾಹ ನೀಡಿದರು.

ಇಂತಹ ಕಾರ್ಯಕ್ರಮಗಳಿಂದ ಮಹಿಳೆಯರಿಗೆ ಮತ್ತಷ್ಟು ಸ್ಫೂರ್ತಿ ಸಿಗಲು ಸಾಧ್ಯವಿದೆ. ಜಿಲ್ಲೆಯ 86 ಸಾವಿರ ಮಂದಿ ಮಹಿಳೆಯರು ಸಂಜೀವಿನಿಯ ಸದಸ್ಯರಾಗಿದ್ದಾರೆ. 155 ಪಂಚಾಯತ್ಗಳಲ್ಲಿಯೂ ಇದು ಸಕ್ರಿಯವಾಗಿ ಕಾರ್ಯಚರಿಸುತ್ತಿದೆ. ನಮ್ಮ ಮನೆ ಹಾಗೂ ಸುತ್ತಮುತ್ತಲು ಬೆಳೆದ ಆಹಾರೋತ್ಪನ್ನಗಳನ್ನು ಸೇವಿಸುವುದರಿಂದ ಉತ್ತಮ ಆರೋಗ್ಯ ಹಾಗೂ ಸ್ಥಳೀಯವಾಗಿ ಉದ್ಯೋಗಾವಕಾಶ ಸಿಗಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಮಹಿಳೆಯರು ಪ್ರಯತ್ನಶೀಲರಾಗಬೇಕು ಎಂದರು.

ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿ ನಲ್ಲಿ ಸರಕಾರ ಹೆಚ್ಚಿನ ಒತ್ತು ನೀಡುತ್ತಿದ್ದು, ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಪ್ರತೀ ಭಾನುವಾರ ಸಂಜೀವಿನಿ ಸಂತೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಬೇಕು. ಸಾರ್ವಜನಿಕರು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತಾಗಬೇಕು ಮತ್ತು ವಿಶೇಷವಾಗಿ ಬನ್ನಂಜೆ ಆಸು ಪಾಸಿನ ವಸತಿ ಸಮುಚ್ಚಯದ ಸರ್ವರೂ ಆಗಮಿಸಿ ಖರೀದಿಸುವ ಮೂಲಕ ಪ್ರೋತ್ಸಾಹ ನೀಡಬೇಕು ಎಂದು ಪ್ರಸನ್ನ ಹೆಚ್ ಹೇಳಿದರು.

ಈ ಸಂದರ್ಭ ಜಿಲ್ಲಾ ಪಂಚಾಯತ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಉಪಸ್ಥಿತರಿದ್ದರು


Spread the love