ಉಡುಪಿ: ಮಾದಕ ವಸ್ತುಗಳ ಸೇವನೆ, 40 ಪ್ರಕರಣ ದಾಖಲು – ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ

Spread the love

ಉಡುಪಿ: ಮಾದಕ ವಸ್ತುಗಳ ಸೇವನೆ, 40 ಪ್ರಕರಣ  ದಾಖಲು – ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ

ಉಡುಪಿ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಮಾಡಿದವರ ಹಾಗೂ ಮಾರಾಟದಲ್ಲಿ ಭಾಗಿಯಾದವರ ವಿರುದ್ದ ಪ್ರಕರಣ ದಾಖಲಿಸುವ ವಾರಾಂತ್ಯಗಳಲ್ಲಿ ವಿಶೇಷ ಅಭಿಯಾನ ನಡೆಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಹೇಳಿದ್ದಾರೆ.

ಕಳೆದ ವಾರದಲ್ಲಿ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 40 ಪ್ರಕರಣಗಳು ಮಾದಕ ದ್ರವ್ಯ ಸೇವನೆ ಮಾಡಿದವರ ವಿರುದ್ದ ದಾಖಲಿಸಲಾಗಿದೆ.

ಮುಂದಿನ ದಿನಗಳಲ್ಲಿ ಕೂಡ ಪ್ರವಾಸಿ ಸ್ಥಳಗಳು, ಪಾಳು ಬಿದ್ದ ಸ್ಥಳಗಳು, ಶಿಕ್ಷಣ ಸಂಸ್ಥೆಗಳ ಬಳಿ ಕೂಡ ಇಂತಹ ಅಭಿಯಾನವನ್ನು ಮುಂದುವರೆಸಲಾಗುವುದು ಮತ್ತು ಮಾದಕ ವಸ್ತುಗಳ ಸೇವನೆ ಮಾಡಿದವರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.


Spread the love