ಉಡುಪಿ: ಲಕ್ಷಾಂತರ ರೂ ಮೌಲ್ಯದ ಅಕ್ರಮ ಪಟಾಕಿ ಅಕ್ರಮ ಸಂಗ್ರಹದ ಮೇಲೆ ಪೊಲೀಸರ ದಾಳಿ

Spread the love

ಉಡುಪಿ: ಲಕ್ಷಾಂತರ ರೂ ಮೌಲ್ಯದ ಅಕ್ರಮ ಪಟಾಕಿ ಅಕ್ರಮ ಸಂಗ್ರಹದ ಮೇಲೆ ಪೊಲೀಸರ ದಾಳಿ

ಉಡುಪಿ: ಉಡುಪಿ: ದೀಪಾವಳಿ ಹಬ್ಬದ ಹಿನ್ನೆಲೆಯಾಗಿ ಅಕ್ರಮವಾಗಿ ಹಾಗೂ ಅಪಾಯಕಾರಿಯಾಗಿ ಪಟಾಕಿಗಳನ್ನು ಸಂಗ್ರಹಿಸಿ ಮಾರಾಟಕ್ಕೆ ಇಟ್ಟುಕೊಂಡಿರುವ ಬಗ್ಗೆ ಬಂದಿದ್ದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಕಳ, ಬ್ರಹ್ಮಾವರ ಹಾಗೂ ಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಮಿಯಾರ್, ಕುಂಜಾಲು ಮತ್ತು ತೆಕ್ಕಟ್ಟೆ ಪ್ರದೇಶಗಳಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ದೊಡ್ಡ ಪ್ರಮಾಣದ ಸಿಡಿಮದ್ದುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸಿಡಿಮದ್ದುಗಳನ್ನು ಅಧಿಕೃತ ಸ್ಫೋಟಕ ಸಂಗ್ರಹಾಗಾರ (Explosives Magazine) ಪ್ರದೇಶಗಳಿಗೆ ಸ್ಥಳಾಂತರಿಸಿ ನಂತರ ನಿಯಮಾನುಸಾರ ನಾಶಪಡಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಕೆ. ಪ್ರಶಾಂತ್ ಜೋಗಿ (44), ಯಾವುದೇ ಪರವಾನಿಗೆ ಇಲ್ಲದೇ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ, ತನ್ನ ಮನೆಯ ಪಕ್ಕದ ಶೆಡ್ನಲ್ಲಿ ಮಾನವ ಜೀವಕ್ಕೆ ಅಪಾಯ ಉಂಟಾಗುವ ರೀತಿಯಲ್ಲಿ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡಿದ್ದಾನೆ. ಪೊಲೀಸರು ಸ್ಥಳದಲ್ಲಿ ₹1,61,372 ಮೌಲ್ಯದ 332 ಬಾಕ್ಸ್ ವಿವಿಧ ಬ್ರ್ಯಾಂಡ್ಗಳ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಆರೂರು ನಿವಾಸಿ ಶಿವಾನಂದ ರಾವ್ (50), ತನ್ನ ಮನೆಯ ಪಕ್ಕದ ಶ್ಯಾಮಿಯಾನ ಗೋದಾಮಿನಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಹಾಗೂ ಪರವಾನಿಗೆ ಇಲ್ಲದೇ ಮಾನವ ಜೀವಕ್ಕೆ ಅಪಾಯ ಉಂಟಾಗುವ ರೀತಿಯಲ್ಲಿ ಪಟಾಕಿಗಳನ್ನು ಅಕ್ರಮವಾಗಿ ಸಂಗ್ರಹಿಸಿಕೊಂಡಿದ್ದಾನೆ. ಪೊಲೀಸರು ಸ್ಥಳದಲ್ಲಿ ₹35,000 ಮೌಲ್ಯದ 16 ಬಾಕ್ಸ್ ವಿವಿಧ ಬ್ರ್ಯಾಂಡ್ಗಳ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಕಳ ತಾಲೂಕಿನ ಮೀಯಾರು ನಲ್ಲಿ ಕೂಡ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದು ಇದನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದು ಇದರ ಮೌಲ್ಯ ಇನ್ನಷ್ಟೇ ತಿಳಿಯಬೇಕಾಗಿದೆ.
ಈ ಸಂಬಂಧ Explosives Act 9B(1)(b) ಹಾಗೂ BNS 287, 288 ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಅಕ್ರಮ ಸಿಡಿಮದ್ದು ಸಂಗ್ರಹಣೆ ಮತ್ತು ಖರೀದಿ ಕುರಿತು ತನಿಖೆ ಮುಂದುವರಿದಿದೆ.

ಪರವಾನಗಿ ಇಲ್ಲದೇ ಅಥವಾ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಸಿಡಿಮದ್ದುಗಳನ್ನು ಸಂಗ್ರಹಿಸುವ ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments