ಉಡುಪಿ : ವ್ಯಕ್ತಿಯಿಂದ ಮೈ ಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

Spread the love

ಉಡುಪಿ : ವ್ಯಕ್ತಿಯಿಂದ ಮೈ ಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

ಉಡುಪಿ : ವ್ಯಕ್ತಿಯೊಬ್ಬರು ಮೈ ಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಎಂ ಜಿ ಎಂ ಕಾಲೇಜಿನ ಮೈದಾನದಲ್ಲಿ ಶನಿವಾರ ರಾತ್ರಿ ವೇಳೆ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಬಡಗಬೆಟ್ಟು ನಿವಾಸಿ ಶ್ರಿ ವಾತ್ಸವ(30) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ ಶ್ರೀವಾತ್ಸವ ಶನಿವಾರ ರಾತ್ರಿ 9 ಗಂಟೆಯ ಸುಮಾರಿಗೆ ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆಗೆ ಯತ್ನಿಸಿದ್ದು ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬಂದಿ ಸ್ಥಳಕ್ಕೆ ದಾವಿಸಿ ಗಾಯಾಳುವನ್ನು ಅಜ್ಜರಕಾರಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ವ್ಯಕ್ತಿಗೆ ಬೆಂಕಿಯಿಂದ ಗಂಭೀರ ಗಾಯಗೊಂಡಿರುವ ಕಾರಣ ಮಣಿಪಾಲದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.


Spread the love