ಉಡುಪಿ ಶಾಸಕ ರಘುಪತಿ ಭಟ್ ಗೆ ಕೊರೋನಾ ಪಾಸಿಟಿವ್

Spread the love

ಉಡುಪಿ ಶಾಸಕ ರಘುಪತಿ ಭಟ್ ಗೆ ಕೊರೋನಾ ಪಾಸಿಟಿವ್

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ರಘುಪತಿ ಭಟ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಘುಪತಿ ಭಟ್ ಅವರು ಕೋವಿಡ್ -19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗಿ ಜಾಗೃತೆ ವಹಿಸಿ ಎಂದು ಅವರು ಹೇಳಿದ್ದಾರೆ.


Spread the love