ಉತ್ತರಪ್ರದೇಶದ ಚುನಾವಣಾ ಫಲಿತಾಂಶ ಕರ್ನಾಟಕದಲ್ಲಿ ಪುನರಾವರ್ತನೆ : ರಶ್ಮಿ ಡಿಸೋಜ

Spread the love

ಉತ್ತರಪ್ರದೇಶದ ಚುನಾವಣಾ ಫಲಿತಾಂಶ ಕರ್ನಾಟಕದಲ್ಲಿ ಪುನರಾವರ್ತನೆ : ರಶ್ಮಿ ಡಿಸೋಜ

ಮಂಗಳೂರು: ಉತ್ತರಪ್ರದೇಶದಲ್ಲಿ ಅಲ್ಪಸಂಖ್ಯಾತರು ಬಿಜೆಪಿಯತ್ತ ಒಲವು ತೋರಿಸಿರುವುದು ಚುನಾವಣಾ ಫಲಿತಾಂಶದಿಂದ ಖಚಿತವಾಗಿದ್ದು, ಮುಂದೆ ಕರ್ನಾಟಕದಲ್ಲೂ ಇದು ಪುನರಾವರ್ತನೆಯಾಗುತ್ತದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಪ್ರದಾನ ಕಾರ್ಯದರ್ಶಿ ರಶ್ಮಿ ಡಿ’ಸೋಜಾ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷರಾದ ಜೋಯ್ಲಸ್ ಡಿ’ಸೋಜಾ ಅವರ ಅಧ್ಯಕ್ಷತೆ ವಹಿಸಿ ಮಂಡಲ ಮಟ್ಟದಲ್ಲಿ ಅಲ್ಪಸಂಖ್ಯಾತ ಮೋರ್ಚಾವು ವಿವಿಧ ಕಾರ್ಯಯೋಜನೆಗಳ ಮೂಲಕ ಅಲ್ಪಸಂಖ್ಯಾತ ಬಾಂಧವರನ್ನು ಬಿಜೆಪಿಯತ್ತ ಸೆಳೆಯಲು ಯಶಸ್ವಿಯಾಗಿದೆ. ಮುಂಬರುವ ಚುನಾವಣೆಯ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಭಾರೀ ಪ್ರಮಾಣದಲ್ಲಿ ಬಿಜೆಪಿಯನ್ನು ಬೆಂಬಲಿಸುವುದು ಶತಃಸಿದ್ಧ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮಾತನಾಡಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತುಕೊಡುವಂತೆ ಕರೆನೀಡಿದರು. ಈ ಸಂದರ್ಭದಲ್ಲಿ ಇತ್ತೀಚೆಗೆ ಎಪಿಎಂಸಿ ಚುನಾವಣೆಯಲ್ಲಿ ಜಯಗಳಿಸಿದ ಬೆಳ್ತಂಗಡಿಯ ಸೆಲೆಸ್ತಿನ್ ಡಿ’ಸೋಜಾ ಅವರನ್ನು ಸನ್ಮಾನಿಸಲಾಯಿತು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕ್ಯಾ| ಬ್ರಿಜೇಶ್ ಚೌಟ, ಸುದರ್ಶನ ಎಂ, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಭಾರಿಯಾಗಿರುವ ಸತೀಶ್ ಕುಂಪಲ, ರಾಜ್ಯ ಅಲ್ಪ ಸಂಖ್ಯಾತ ಮೋರ್ಚಾದ ರಹೀಂ ಉಚ್ಚಿಲ್, ಜಮಾಲುದ್ದೀನ್ ಉಪಸ್ಥಿತರಿದ್ದರು.

ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮುನೀರ್ ಬಾವಾ ಸ್ವಾಗತಿಸಿದರು. ಸಾಬು ಜೇಕಬ್ ಕಾರ್ಯಕ್ರಮ ನಿರೂಪಿಸಿದರು. ಮಹಮ್ಮದ್ ವಳವೂರು ವಂದಿಸಿದರು.


Spread the love
1 Comment
Inline Feedbacks
View all comments
Sheikh
7 years ago

So you thought that the newly minted monk chief minister of Uttar Pradesh, Yogi Adityanath, was only given to making blood-thirsty Muslim-baiting speeches. Well, his views documented in his writings (in Hindi), on women and Christians should also make you wonder at the BJP’s wisdom and commitment to hugely publicised schemes such as “beti bachao, beti padhao”. Consider the top five Yogi bites which are more medieval monk than modern leader: 1) On several documented occasions, Yogi Adityanath had accused Mother Teresa of being part of a conspiracy to “Christianise” India. The news agency PTI had reported on June 21,… Read more »