ಉತ್ತರ ಕನ್ನಡ: ಕಾಳಿ ನದಿಯಲ್ಲಿ ಹುಬ್ಬಳ್ಳಿಯ ಒಂದೇ ಕುಟುಂಬದ ಆರು ಜನರು ಸಾವು

Spread the love

ಉತ್ತರ ಕನ್ನಡ: ಕಾಳಿ ನದಿಯಲ್ಲಿ ಹುಬ್ಬಳ್ಳಿಯ ಒಂದೇ ಕುಟುಂಬದ ಆರು ಜನರು ಸಾವು

ಕಾರವಾರ: ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಸಾವನ್ನಪ್ಪಿರುವಂತಹ  ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ  ತಾಲೂಕಿನ ಅಕ್ವಾಡ ಗ್ರಾಮದ ಬಳಿ ದುರಂತ ಸಂಭವಿಸಿದೆ.

ಪ್ರವಾಸಕ್ಕೆ ತೆರಳಿದ್ದಾಗ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿತ್ತು. ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ನಜೀರ್ ಅಹ್ಮದ್(40), ಅಲ್ಛೀಯಾ ಅಹ್ಮದ್(10), ಮೋಹಿನ್(6), ರೇಷಾ ಉನ್ನಿಸಾ(38), ಇಫ್ರಾ‌ ಅಹ್ಮದ್(15), ಅಬೀದ್ ಅಹ್ಮದ್(12) ಮೃತರು.

ಮೃತರನ್ನು ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಒಟ್ಟು 8 ಜನರು ಪ್ರವಾಸಕ್ಕೆ ತೆರಳಿದ್ದರು. ಆ ಪೈಕಿ ಇಬ್ಬರು ಮಹಿಳೆಯರು ನೀರಿಗೆ ಇಳಿದಿರಲಿಲ್ಲ ಎನ್ನಲಾಗುತ್ತಿದೆ. ಸದ್ಯ ಕಾಳಿ ನದಿಯಿಂದ ಆರು ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ದಾಂಡೇಲಿ ಆಸ್ಪತ್ರೆಗೆ ಶವಗಳನ್ನು ಸ್ಥಳಾಂತರ ಮಾಡಲಾಗಿದೆ. ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love