
Spread the love
ಉದಯಪುರ ಘಟನೆ: ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಖಂಡನೆ
ಉಡುಪಿ: ರಾಜಸ್ಥಾನದ ಉದಯ್ ಪುರದಲ್ಲಿ ಟೈಲರ್ ಕನ್ನಯ್ಯಲಾಲ್ ರನ್ನು ಪೈಶಾಚಿಕ ರೀತಿಯಲ್ಲಿ ಹತ್ಯೆಗೈದಿದ್ದ ಇಬ್ಬರು ಹಂತಕರನ್ನು ಯಾವುದೇ ಮುಲಾಜಿಲ್ಲದೆ ಶಿಕ್ಷಿಸಬೇಕು.ಇಂತಹ ಸಮಾಜಘಾತುಕ ಶಕ್ತಿಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಿದ್ದು ಇಂತಹ ಅಪರಾಧ, ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಹೇಳಿದ್ದಾರೆ
ಎಲ್ಲರೂ ನೆಲದ ಕಾನೂನಿಗೆ ಗೌರವ ಕೊಟ್ಟು ಸಂವಿಧಾನ ಬದ್ಧವಾಗಿ ವರ್ತಿಸಬೇಕು. ಅನ್ಯಾಯವಾದ ಸಂದರ್ಭದಲ್ಲಿ ನ್ಯಾಯಾಲಯದ ಮುಖಾಂತರ ನ್ಯಾಯ ಪಡೆಯಬೇಕೇ ಹೊರತು ಈ ರೀತಿಯಾಗಿ ಕಾನೂನುನನ್ನು ಕೈಗೆತ್ತಿಕೊಳ್ಳುವುದು ಖಂಡನಾರ್ಹ. ಉದಯಪುರದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತಾ ಸೂಕ್ತ ತನಿಖೆ ನಡೆದು ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತೆ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.
Spread the love