ಉದಯ ಗಾಣಿಗ ಕೊಲೆ ಪ್ರಕರಣ: ಆರೋಪಿ ಬಿಜೆಪಿ ಮುಖಂಡ ಬಾಲಚಂದ್ರ ಭಟ್ ಗೆ ಜಾಮೀನು

Spread the love

ಉದಯ ಗಾಣಿಗ ಕೊಲೆ ಪ್ರಕರಣ: ಆರೋಪಿ ಬಿಜೆಪಿ ಮುಖಂಡ ಬಾಲಚಂದ್ರ ಭಟ್ ಗೆ ಜಾಮೀನು

 
ಕುಂದಾಪುರ: ಕಳೆದ ವರ್ಷ ಕುಂದಾಪುರ ತಾಲೂಕಿನ ಯಡಮೊಗ್ಗೆ ಎಂಬಲ್ಲಿ ಬಿಜೆಪಿ ಕಾರ್ಯಕರ್ತ ಉದಯ ಗಾಣಿಗ ಎಂಬವರ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳಲ್ಲೋರ್ವರಾದ ಬಿಜೆಪಿ ಮುಖಂಡ ಬಾಲಚಂದ್ರ ಭಟ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಬಾಲಚಂದ್ರ ಭಟ್ ಘಟನೆ ನಡೆದು ನಾಲ್ಕು ದಿನಗಳ ಬಳಿಕ ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು. ಉಚ್ಛ ನ್ಯಾಯಾಲಯದಲ್ಲಿಯೂ ಅವರಿಗೆ ಜಾಮೀನು ದೊರಕಿರಲಿಲ್ಲ. ಇದೀಗ ಪೊಲೀಸರು ಚಾರ್ಜ್ ಶೀಟ್ ಹಾಕಿದ್ದು, ಹದಿನಾಲ್ಕು ತಿಂಗಳ ಬಳಿಕ ಸುಪ್ರೀಂ ಜಾಮೀನು ನೀಡಿದೆ.

ಪ್ರಕರಣದ ಪ್ರಮುಖ ಆರೋಪಿ ಪ್ರಾಣೇಶ್ ಯಡಿಯಾಳ್ ಹಾಗೂ ಇತರರಿಗೆ ಇನ್ನೂ ಜಾಮೀನು ದೊರಕಿಲ್ಲ.

ಆರೋಪಿ ಬಾಲಚಂದ್ರ ಭಟ್ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ದೇವದತ್ತ್ ಕಾಮತ್ ವಾದಿಸಿದ್ದರು.


Spread the love