ಉದ್ಯಾವರ : ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪರ ಮತ ಪ್ರಚಾರ

Spread the love

ಉದ್ಯಾವರ : ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪರ ಮತ ಪ್ರಚಾರ

ಉದ್ಯಾವರ: ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯ ಪರ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರು ಮತ ಪ್ರಚಾರ ಮಾಡುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯದಲ್ಲಿ ಮತ್ತು ಕಾಪು ಕ್ಷೇತ್ರದಲ್ಲಿ ಗಣನೀಯ ಅಭಿವೃದ್ಧಿಯಾಗಿದ್ದು, ಈ ಬಾರಿ ಮತ್ತೊಮ್ಮೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರನ್ನು ಬೆಂಬಲಿಸುವಂತೆ ಕಾರ್ಯಕರ್ತರು ಮತದಾರರ ಮನವಹಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಹರಿಕಾರರಂದೆ ವಿನಯ್ ಕುಮಾರ್ ಸೊರಕೆ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಬಿಂಬಿಸುತ್ತಿದ್ದು, ಕಳೆದ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಸೋತರೂ, ಮನೆಯಲ್ಲಿ ಕುಳಿತುಕೊಳ್ಳದೆ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡಿದ್ದಾರೆ. ಮತ್ತೊಮ್ಮೆ ಅವರನ್ನು ಆರಿಸಿ ಕಳಿಸುವಂತೆ ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರ ಮನ ಒಲೈಕೆ ಮಾಡುತ್ತಿದ್ದಾರೆ.

ಉದ್ಯಾವರ ಗ್ರಾಮದ ಗುಡ್ಡೆಅಂಗಡಿ ಪರಿಸರದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಿಯಾಜ್ ಪಳ್ಳಿ, ಜುಡಿತ್ ಪಿರೇರ, ಆಶಾ ಸುರೇಶ್ ಮತ್ತು ವಾರ್ಡ್ ಅಧ್ಯಕ್ಷ ಗಿರೀಶ್ ಗುಡ್ಡೆಅಂಗಡಿಯ ನೇತೃತ್ವದಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಉತ್ಸಾಹದಿಂದ ಮನೆಮನೆಗೆ ತೆರಳಿ ಮತ ಭೇಟಿ ಮಾಡುತ್ತಿದ್ದಾರೆ.


Spread the love