ಉದ್ಯಾವರ : ಧರ್ಮಪ್ರಾಂತ್ಯದ ನೂತನ ಕುಲಪತಿಗೆ ಸನ್ಮಾನ

Spread the love

ಉದ್ಯಾವರ : ಧರ್ಮಪ್ರಾಂತ್ಯದ ನೂತನ ಕುಲಪತಿಗೆ ಸನ್ಮಾನ

ಉದ್ಯಾವರ: ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ನೂತನ ಕುಲಪತಿಗಳಾಗಿ ಆಯ್ಕೆಯಾಗಿರುವ ಅ. ವಂ. ಡಾ. ರೋಶನ್ ಡಿಸೋಜ ರವರನ್ನು ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದಲ್ಲಿ ಸಮ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ವಂ. ಡಾ. ರೋಶನ್ ಡಿಸೋಜ, ತನ್ನ ಮೇಲೆ ನಂಬಿಕೆ ಇಟ್ಟು ಚಿಕ್ಕ ವಯಸ್ಸಿನಲ್ಲಿ ದೊಡ್ಡ ಜವಾಬ್ದಾರಿಯನ್ನು ನೀಡಿರುವ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಕಳೆದ ನಾಲ್ಕೂವರೆ ವರ್ಷ ಉಡುಪಿ ಧರ್ಮಪ್ರಾಂತ್ಯದ ಕುಲಪತಿಯಾಗಿ ಸೇವೆ ಸಲ್ಲಿಸಿದ್ದ ಉದ್ಯಾವರ ದೇವಾಲಯದ ಪ್ರಧಾನ ಧರ್ಮಗುರು ಅ. ವಂ. ಫಾ. ಸ್ಟ್ಯಾನಿ ಬಿ ಲೋಬೊರವರಿಗೆ ಕೃತಜ್ಞತೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೇವಾಲಯದ ಸಹಾಯಕ ಧರ್ಮಗುರು ವಂ. ಲಿಯೋ ಪ್ರವೀಣ್ ಡಿಸೋಜ, ಪಾಲನಾ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೊರೊನ್ಹಾ, ಕಾರ್ಯದರ್ಶಿ ಮೈಕಲ್ ಡಿಸೋಜಾ ಮತ್ತು 20 ಆಯೋಗದ ಸಂಯೋಜಕ ಜೆರಾಲ್ಡ್ ಪಿರೇರಾ ಉಪಸ್ಥಿತರಿದ್ದರು.


Spread the love