ಉದ್ಯಾವರ ಬಲಾಯಿಪಾದೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿ – ಹಲವರಿಗೆ ಗಾಯ  

Spread the love

ಉದ್ಯಾವರ ಬಲಾಯಿಪಾದೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿ – ಹಲವರಿಗೆ ಗಾಯ  

ಉಡುಪಿ: ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ

ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಬಲಾಯಿಪಾದೆಯ ಬಳಿ ಬ್ಯಾರಿಕೇಡ್‌ ದಾಟುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಮಧ್ಯದಲ್ಲಿನ ಡಿವೈಡರ್‌ ಮೇಲೆ ಮಗುಚಿ ಬಿದ್ದಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಳೊಂದಿಗೆ ಪಾರಾಗಿದ್ದಾರೆ.

ಕೂಡಲೇ ಸಾರ್ವಜನಿಕರು ಹಾಗೂ ಉಡುಪಿ ಸಂಚಾರ ಠಾಣೆ ಹಾಗೂ ಕಾಪು ಠಾಣೆಯ ಪೊಲೀಸರು ಜೊತೆಯಾಗಿ ಸೇರಿ ಪಲ್ಟಿಯಾದ ಬಸ್ಸಿನಿಂದ ಪ್ರಯಾಣಿಕರನ್ನು ಹೊರತೆಗೆಯಲಾಯಿತು. ಅಫಘಾತದಿಂದ ಕೆಲಹೊತ್ತು ರಸ್ತೆ ಸಂಚಾರಕ್ಕೆ ತೊಡಕಾಗಿದ್ದು ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.


Spread the love