ಉದ್ಯಾವರ: ವಿದ್ಯುತ್ ಆಘಾತಕ್ಕೆ ಸಿಲುಕಿ ಯುವಕ ಮೃತ್ಯು

Spread the love

ಉದ್ಯಾವರ: ವಿದ್ಯುತ್ ಆಘಾತಕ್ಕೆ ಸಿಲುಕಿ ಯುವಕ ಮೃತ್ಯು

ಕಾಪು: ವಿದ್ಯುತ್ ಆಘಾತಕ್ಕೆ ಸಿಲುಕಿ ಯುವಕನೋರ್ವ ಮೃತಪಟ್ಟ ಘಟನೆ ಉದ್ಯಾವರ ಕನಕೋಡದಲ್ಲಿ ಬುಧವಾರ ಸಂಜೆ ನಡೆದಿದೆ.

ಮೃತ ಯುವಕನನ್ನು ಮಲ್ಪೆ ಕೊಡವೂರು ನಿವಾಸಿ ಮನೋಜ್ ಕರ್ಕೇರಾ ಅವರ ಪುತ್ರ ಮೋಕ್ಷಿತ್ ಕರ್ಕೆರಾ(25) ಎಂದು ಗುರುತಿಸಲಾಗಿದೆ.

ಬುಧವಾರ ಸಂಜೆ ಉದ್ಯಾವರ ಕನಕೋಡದಲ್ಲಿ ಆತನ ಚಿಕಪ್ಪ ಶಂಕರ ಎಂಬವರ ಮನೆಯಲ್ಲಿದ್ದಾಗ ಜೋರಾಗಿ ಬೀಸಿದ ಗಾಳಿ ಮಳೆಗೆ ವಿದ್ಯುತ್ ಕೈ ಕೊಟ್ಟಿದ್ದು, ಅದನ್ನು ಕಂಡು ಮೈನ್‌ ಸ್ವಿಚ್ ಬೋರ್ಡ್ ಪರಿಶೀಲನೆ ನಡೆಸುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ವಿದ್ಯುತ್ ಶಾಕ್ ನಿಂದ ಗಂಭೀರ ಗಾಯಗೊಂಡ ಆತನನ್ನು‌ ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಮೋಕ್ಷಿತ್ ಕರ್ಕೇರ ಮೆಕ್ಯಾನಿಕ್ ಆಗಿ, ಡೆಕೋರೆಟ್ ಮೊದಲಾದ ಕೆಲಸಗಳನ್ನು ನಡೆಸುತ್ತಿದ್ದನು. ಬಿಡುವಿನ ವೇಳೆಯಲ್ಲಿ ತಾಯಿಯೊಂದಿಗೆ ಮಲ್ಪೆಯಲ್ಲಿ ಮೀನು‌ ಮಾರಾಟದ ವ್ಯವಹಾರದಲ್ಲೂ ಕೈ ಜೋಡಿಸುತ್ತಿದ್ದನು.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರಿಸಿದ್ದಾರೆ.


Spread the love