ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದು ವಿಶೇಷ ಗೌರವ: ಮಾರ್ಗರೇಟ್ ಆಳ್ವಾ

Spread the love

ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದು ವಿಶೇಷ ಗೌರವ: ಮಾರ್ಗರೇಟ್ ಆಳ್ವಾ

ಬೆಂಗಳೂರು: ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದು ನನಗೆ ಸಂದ ವಿಶೇಷ ಗೌರವವಾಗಿದೆ ಎಂದು ಮಾರ್ಗರೆಟ್ ಆಳ್ವಾ ಭಾನುವಾರ ಪ್ರತಿಕ್ರಿಯಿಸಿದ್ದಾರೆ.

ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿರುವುದು ಒಂದು ವಿಶೇಷ ಮತ್ತು ಗೌರವವಾಗಿದೆ. ನಾನು ಈ ನಾಮನಿರ್ದೇಶನವನ್ನು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆಗಾಗಿ ವಿರೋಧ ಪಕ್ಷದ ನಾಯಕರಿಗೆ ಧನ್ಯವಾದಗಳು ಎಂದು ಮಾರ್ಗರೇಟ್ ಆಳ್ವ ಟ್ವೀಟ್ ಮಾಡಿದ್ದಾರೆ.


Spread the love