ಉಪವಾಸ ಸತ್ಯಾಗ್ರಹಕ್ಕೆ ಸಂಸದ ನಳಿನ್ ಬೆಂಬಲ

Spread the love

ಉಪವಾಸ ಸತ್ಯಾಗ್ರಹಕ್ಕೆ ಸಂಸದ ನಳಿನ್ ಬೆಂಬಲ

ಮಂಗಳೂರು : ಅವೈಜ್ಞಾನಿಕವಾಗಿರುವ ಎತ್ತಿನಹೊಳೆ ಯೋಜನೆಯನ್ನು ಕೈ ಬಿಡುವಂತೆ ಆಗ್ರಹಿಸಿ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ವತಿಯಿಂದ ಫೆ.10 ರಿಂದ ನಡೆಯುವ ಆಮರಣಾಂತ ಉಪವಾಸ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಸಂಸದ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.
ನೇತ್ರಾವತಿ ನದಿಯ ಉಳಿವಿಗಾಗಿ ಈಗಾಗಲೇ ದಕ್ಷಿಣ ಕನ್ನಡದಲ್ಲಿ ವಿವಿಧ ಹಂತದ ಹೋರಾಟ ನಡೆದಿದೆ. ಆದರೆ ರಾಜ್ಯ ಸರ್ಕಾರ ಜಿಲ್ಲೆಯ ಜನತೆಯ ಭಾವನೆಗಳಿಗೆ ಯಾವುದೇ ಬೆಲೆ ನೀಡದೆ ಎತ್ತಿನಹೊಳೆ ಯೋಜನೆಯ ಕಾಮಗಾರಿ ನಡೆಸುತ್ತಿದೆ. ಜಿಲ್ಲೆಯ ಉಳಿವಿಗಾಗಿ ನಿರ್ಣಾಯಕ ಹೋರಾಟ ಅನಿವಾರ್ಯವಾಗಿದೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love