ಉಪ್ಪಳದಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ

Spread the love

ಉಪ್ಪಳದಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ

ಮಂಜೇಶ್ವರ: ಸಿಪಿಎಂ ಕಾರ್ಯಕರ್ತನೋರ್ವನನ್ನು ಮಾರಕಾಯುಧಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ಉಪ್ಪಳದ ಮಂಗಲ್ಪಾಡಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.

ಮೃತರನ್ನು ಸೋಂಕಾಲು ನಿವಾಸಿ ಅಝೀಮ್ ಎಂಬವರ ಪುತ್ರ ಅಬೂಬಕರ್ ಸಿದ್ದೀಕ್(21) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ.

ಸಿದ್ದೀಕ್ ಅವರ ಮೇಲೆ ಮಂಗಲ್ಪಾಡಿಯ ಸೋಂಕಾಲು ಎಂಬಲ್ಲಿ ನಿನ್ನೆ ರಾತ್ರಿ ಬೈಕ್‌ಗಳಲ್ಲಿ ಬಂದ ನಾಲ್ವರಿದ್ದ ತಂಡವು ಮಾರಕಾಯುಧಗಳಿಂದ ಮಾರಣಾಂತಿಕ ದಾಳಿ ನಡೆಸಿ ಪರಾರಿಯಾಗಿದೆ. ಇದರಿಂದ ಗಂಭೀರ ಗಾಯಗೊಂಡು ಬಿದ್ದಿದ್ದ ಸಿದ್ದೀಕ್ ಅವರನ್ನು ಸ್ಥಳೀಯರು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.

ಘಟನಾ ಸ್ಥಳದಲ್ಲಿ ಬಿಗು ಬಂದೋಬಸ್ತ್ ಕಲ್ಪಿಸಲಾಗಿದ್ದು, ಕಾಸರಗೋಡು ಡಿವೈಎಸ್ಪಿ ಎಂ.ವಿ ಸುಕುಮಾರನ್, ಕುಂಬಳೆ ಸಿಐ ಪ್ರೇಂ ಸದನ್ ನೇತೃತ್ವದ ಪೊಲೀಸ್‌ತಂಡ ಮೊಕ್ಕಾಂ ಹೂಡಿದೆ.


Spread the love