Spread the love
ಉಪ್ಪಿನಂಗಡಿ| ಅಕ್ರಮ ಜಾನುವಾರು ಸಾಗಾಟ ಆರೋಪ; ವಾಹನ ಚಾಲಕ ಸೆರೆ
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮ ವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ಜಯಂತ್ ಗೌಡ ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ತಲುಪಿಸುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Spread the love