ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Spread the love

ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು
 
ಉಪ್ಪಿನಂಗಡಿ: ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ಸೋನು ಸೋಂಕರ್‌ ಅವರ ಪತ್ನಿ ರೀಮಾ ಸೋಂಕರ್‌ (26) ಮತ್ತು ಮಗು ರಿಯಾ (1) ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಟೀರಿಯರ್‌ ಡೆಕೊರೇಟರ್‌ ಆಗಿರುವ ಸೋನು ಸೋಂಕರ್‌ ಉತ್ತರ ಪ್ರದೇಶದ ಅಜಾಮ್‌ ಘರ್‌ ಜಿಲ್ಲೆಯ ಅಮಹಾಮಾಫಿ ಗ್ರಾಮದ ನಿವಾಸಿಯಾಗಿದ್ದು, ಕೌಕ್ರಾಡಿಯಲ್ಲಿ ಕೃಷ್ಣಪ್ಪ ಅವರ ಬಾಡಿಗೆ ಮನೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು.


Spread the love

Leave a Reply