ಉಭಯಪಕ್ಷಗಳು ಒಪ್ಪಿದರೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ಸಿದ್ದ- ಪ್ರಮೋದ್ ಮಧ್ವರಾಜ್

Spread the love

ಉಭಯಪಕ್ಷಗಳು ಒಪ್ಪಿದರೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ಸಿದ್ದ- ಪ್ರಮೋದ್ ಮಧ್ವರಾಜ್

ಬೆಂಗಳೂರು:  ಕಾಂಗ್ರೆಸ್ – ಜೆಡಿಎಸ್ ಉಭಯಪಕ್ಷಗಳು ಒಪ್ಪಿಗೆ ಸೂಚಿಸಿದರೆ ತಾನು ಜೆಡಿಎಸ್ ಚಿಹ್ನೆಯಡಿಲ್ಲಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ದವಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಅವರು ಬುಧವಾರ ಸಂಜೆ ಪ್ರಮೋದ್ ಮಧ್ವರಾಜ್ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಕುರಿತು ದೇವೇಗೌಡರ ಜೊತೆ ಚರ್ಚೆ ನಡೆಸಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಮೋದ್ ಮಧ್ವರಾಜ್, ಸಹಜವಾಗಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಬಯಸಿದ್ದೆ. ಆದ್ರೆ ಈ ಕ್ಷೇತ್ರ ಜೆಡಿಎಸ್ ತೆಕ್ಕೆಗೆ ಬಂದಿದೆ.  ಇದು ಮತ್ತೆ ಕೈ ಪಾಲಿಗೆ ಬರಬೇಕಿದ್ದರೆ ಹೈ ಕಮಾಂಡ್ ಮಟ್ಟದಲ್ಲಿ ತೀರ್ಮಾನ ಆಗಬೇಕು. ಒಂದು ವೇಳೆ ಸಾಧ್ಯ ಆಗದೆ ಇದ್ದರೆ, ಉಭಯ ಪಕ್ಷಗಳು ಒಪ್ಪಿದರೆ ಜೆಡಿಎಸ್ ಚಿಹ್ನೆ ಅಡಿಯಲ್ಲಿ ಸ್ಪರ್ಧೆಗೆ ಸಿದ್ದ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.


Spread the love