ಉಳ್ಳಾಲ | ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Spread the love

ಉಳ್ಳಾಲ | ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಳ್ಳಾಲ: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮೀಶ ಬಾಬು(48) ಬಂಧಿತ ಆರೋಪಿ.

ಈತನನ್ನು ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬ್ಬಂದಿಯ ತಂಡವು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ಮಂಗಳೂರು ನಗರದ ಏಳನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.


Spread the love