
Spread the love
ಉಳ್ಳಾಲ ನಿವಾಸಿ ಬಂಟ್ವಾಳ ಪತ್ನಿ ಮನೆಯಲ್ಲಿ ನೇಣು ಬಿಗಿದು ಸಾವು
ಉಳ್ಳಾಲ: ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಆತ್ಮಹತ್ಯೆಗೈದ ಘಟನೆ ನಡೆದಿದೆ.
ರವೀಂದ್ರ ಅವರು ನಿನ್ನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮದ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನು ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಪತ್ನಿಯ ಮನೆ ವಾಪಸ್ಸಾಗಿದ್ದರು. ಸಂಜೆ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ಗಾಬರಿಗೊಂಡ ಪತ್ನಿ ನೆರೆಮನೆಯವರಲ್ಲಿ ವಿಚಾರಿಸಿದ್ದಾರೆ. ಅವರು ಮನೆ ಕಡೆ ತೆರಳಿದಾಗ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮ ಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ.
ಆರ್ಥಿಕವಾಗಿ ನೊಂದು ಕೃತ್ಯ ಎಸಗಿರುವ ಶಂಕೆಯಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Spread the love