ಉಳ್ಳಾಲ: ರಿಕ್ಷಾ ಚಾಲಕ ಆತ್ಮಹತ್ಯೆ

Spread the love

ಉಳ್ಳಾಲ: ರಿಕ್ಷಾ ಚಾಲಕ ಆತ್ಮಹತ್ಯೆ

ಉಳ್ಳಾಲ: ತೊಕ್ಕೊಟ್ಟು ರಿಕ್ಷಾ ಪಾರ್ಕ್‌ ನಲ್ಲಿ ರಿಕ್ಷಾ ಚಾಲಕನಾಗಿದ್ದ ಕೆರೆಬೈಲು ಸೇವಂತಿಗುಡ್ಡೆ ನಿವಾಸಿ ಸಮೀರ್‌ (45) ಎಂಬವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ವಿವಾಹಿತರಾಗಿರುವ ಸಮೀರ್‌ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ನಡೆಸಿರುವ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love