ಉಳ್ಳಾಲ: ಸ್ನಾನಕ್ಕೆಂದು ಕೊಳಕ್ಕೆ ಇಳಿದ ಯುವಕ ನೀರುಪಾಲು

Spread the love

ಉಳ್ಳಾಲ: ಸ್ನಾನಕ್ಕೆಂದು ಕೊಳಕ್ಕೆ ಇಳಿದ ಯುವಕ ನೀರುಪಾಲು

ಉಳ್ಳಾಲ: ಸ್ನೇಹಿತರ ಜತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದ ಯುವಕನೋರ್ವ ನೀರುಪಾಲಾಗಿರುವ ಘಟನೆ ಕೆಳಗಿನ ತಲಪಾಡಿ ಬಳಿ ಸಂಭವಿಸಿದೆ.

ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ದಿ. ಸುಬ್ರಾಯ ಆಚಾರ್ಯ-ಉಮಾವತಿ ದಂಪತಿ ಪುತ್ರ ಹರಿಪ್ರಸಾದ್‌ ಆಚಾರ್ಯ (೩೬) ಮೃತರು.

ತಲಪಾಡಿಯಲ್ಲಿರುವ ಖಾಸಗಿ ಜಾಗದಲ್ಲಿರುವ ಕೊಳಕ್ಕೆ ಸ್ನಾನಕ್ಕೆಂದು ಬಂದಿದ್ದ ನಾಲ್ವರ ಪೈಕಿ ಹರಿಪ್ರಸಾದ್‌ ನೀರಿನಡಿಯ ಕೆಸರಿನಲ್ಲಿ ಸಿಲುಕಿ ಮುಳುಗಿದ್ದಾರೆ. ಘಟನಾ ಸ್ಥಳಕ್ಕೆ ಮಂಗಳೂರಿನಿಂದ ಅಗ್ನಿ ಶಾಮಕ ದಳದವರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಮೃತರು ವೆಲ್ಡಿಂಗ್‌ ವೃತ್ತಿ ನಡೆಸುತ್ತಿದ್ದರು.

ಮೃತರು ಅವಿವಾಹಿತರಾಗಿದ್ದು, ತಾಯಿ, ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ.


Spread the love