ಉಳ್ಳಾಲ | 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಉಳ್ಳಾಲ: ಗಾಂಜಾ ಪ್ರಕರಣವೊಂದರಲ್ಲಿ ಶಾಮೀಲಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಮುಕಚೇರಿ ನಿವಾಸಿ ಮುಹಮ್ಮದ್ ಸಂಶೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಲಯವು ಎಲ್ ಪಿಸಿ ವಾರಂಟ್ ಹೊರಡಿಸಿತ್ತು.14 ವರ್ಷಗಳ ಬಳಿಕ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ
