ಎಡಪಕ್ಷಗಳ ದೇಶವ್ಯಾಪಿ ಮುಷ್ಕರ; ಶಾಲಾ ಕಾಲೇಜುಗಳಿಗೆ ರಜೆ ಇಲ್ಲ- ಜಿಲ್ಲಾಧಿಕಾರಿ ಸ್ಪಷ್ಟನೆ

Spread the love

ಎಡಪಕ್ಷಗಳ ದೇಶವ್ಯಾಪಿ ಮುಷ್ಕರ; ಶಾಲಾ ಕಾಲೇಜುಗಳಿಗೆ ರಜೆ ಇಲ್ಲ- ಜಿಲ್ಲಾಧಿಕಾರಿ ಸ್ಪಷ್ಟನೆ

 ಎಡಪಕ್ಷಗಳು ಸಾರ್ವತ್ರಿಕ ಮುಷ್ಕರಕ್ಕೆ ಜನವರಿ 8ರಂದು ಕರೆ ನೀಡಿದ್ದು ಈ ಪ್ರಯುಕ್ತನಾಳೆ ( ಜನವರಿ 8) ಶಾಲಾ‌ ಕಾಲೇಜುಗಳಿಗೆ ರಜೆ ಘೋಷಿಸಿರುವ ಬಗ್ಗೆ ಜಿಲ್ಲಾಧಿಕಾರಿಯವರ ಆದೇಶ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿರುವುದನ್ನು ಗಮನಿಸಲಾಗಿದೆ.

  ಈ ಬಗ್ಗೆ ಸ್ಪಷ್ಟಪಡಿಸುವುದೇನಂದರೆ, ಇದು ನಕಲಿಯಾಗಿದ್ದು,  ಮಾನ್ಯ ಜಿಲ್ಲಾಧಿಕಾರಿಗಳು ಇಂತಹ ಯಾವುದೇ ಆದೇಶ ಹೊರಡಿಸಿರುವುದಿಲ್ಲ ಹಾಗೂ ಸಹಿ ಹಾಕಿರುವುದಿಲ್ಲ. ನಾಳೆ ದ.ಕ. ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳು ಎಂದಿನಂತೆ ಇರಲಿದೆ. ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.


Spread the love