ಎನ್.ಎಸ್.ಯು.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ತಹ್ಶೀರ್ ಆಯ್ಕೆ

Spread the love

ಎನ್.ಎಸ್.ಯು.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ತಹ್ಶೀರ್ ಆಯ್ಕೆ

ಮಂಗಳೂರು: ದ.ಕ. ಜಿಲ್ಲಾ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಮೊಹಮ್ಮದ್ ತಹ್ಶೀರ್ ಅವರಿಗೆ ಮಂಗಳೂರು ಸಂತ ಅಲೋಶಿಯಸ್ ಕಾಲೇಜು ಎನ್.ಎಸ್.ಯು.ಐ ಘಟಕದಿಂದ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಅಭಿನಂದನಾ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಅವರು ವಹಿಸಿ ನೂತನ ಪ್ರಧಾನ ಕಾರ್ಯದರ್ಶಿ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಹ್ಶೀರ್, ತನಗೆ ನೀಡಿರುವ ಮಹತ್ವದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಎನ್.ಎಸ್.ಯು.ಐಯನ್ನು ಸಂಘಟಿಸಲು ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಮನ್ ಪೂಜಾರಿ, ಶಾಹಿಲ್ ಎ.ಕೆ, ಸಿರಾಜ್ ಗುದ್ದೂರು, ಫಯಾಝ್ ಅಮ್ಮೆಮ್ಮಾರ್, ಸೈಫ್ ಉಪ್ಪಿನಂಗಡಿ, ಮಹಮೀನ್ ಇತರರು ಉಪಸ್ಥಿತರಿದ್ದರು.

ನಜೀಬ್ ಮಂಚಿ ನಿರೂಪಿಸಿದರು.


Spread the love

Leave a Reply

Please enter your comment!
Please enter your name here