Home Mangalorean News Kannada News ಎನ್.ಎಸ್.ಯು.ಐ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮಮತಾ ನೇರ್ಲಿಗೆ ನೇಮಕ

ಎನ್.ಎಸ್.ಯು.ಐ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮಮತಾ ನೇರ್ಲಿಗೆ ನೇಮಕ

Spread the love

ಎನ್.ಎಸ್.ಯು.ಐ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮಮತಾ ನೇರ್ಲಿಗೆ ನೇಮಕ

ನವದೆಹಲಿ: ಕಾಂಗ್ರೆಸ್ನ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್.ಎಸ್.ಯು.ಐ)ಗೆ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮಮತಾ ನೇರ್ಲಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ದೇಶದ ವಿವಿಧೆಡೆ ಎನ್ಎಸ್ಯುಐಗೆ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಎಐಸಿಸಿ ಮುಖ್ಯಸ್ಥರಾದ ಸೋನಿಯಾಗಾಂಧಿ, ರಾಹುಲ್ಗಾಂಧಿ ಅವರ ಸೂಚನೆ ಮೇರೆಗೆ ಕರ್ನಾಟಕದಿಂದ ಮಮತಾ ನೇರ್ಲಿಗೆ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಈ ಮೊದಲು ಸಹ ರಾಜ್ಯದಿಂದ ರಾಷ್ಟ್ರೀಯ ಕಾರ್ಯದರ್ಶಿಯಾಗಿ 2018ರಲ್ಲಿ ಆಯ್ಕೆಯಾದ ಮೊದಲ ಮಹಿಳಾ ವಿಧ್ಯಾರ್ಥಿ. ಕೇರಳ, ಪಾಂಡಿಚೇರಿ, ಗೋವಾ, ಅಂಡಮಾನ್, ನಿಕೋಬಾರ್ ರಾಜ್ಯಗಳ ಉಸ್ತುವಾರಿ ಜವಾಬ್ದಾರಿ ನೋಡಿಕೊಂಡಿದ್ದಾರೆ. ಇವರ ಕಾರ್ಯವೈಖರಿ ಪರಿಗಣಿಸಿ ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ತಿಳಿಸಿದೆ.

2015 ರಲ್ಲಿ ಎನ್ಎಸ್ಯುಐನ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಹ ಆಯ್ಕೆಯಾಗಿ ಕಾರ್ಯರ್ನಿವಹಿಸಿದ್ದರೆ.


Spread the love

Exit mobile version