ಎನ್ ಡಿ ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ. ಪಿ. ರಾಧಾಕೃಷ್ಣನ್ ವರನ್ನು ಶಾಸಕ ಯಶ್ಪಾಲ್ ಸುವರ್ಣ ಭೇಟಿ

Spread the love

ಎನ್ ಡಿ ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ. ಪಿ. ರಾಧಾಕೃಷ್ಣನ್ ವರನ್ನು ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಿ. ಪಿ. ರಾಧಾಕೃಷ್ಣನ್ ವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ತಮಿಳುನಾಡಿನ ಬಿಜೆಪಿ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಕೊಯಮತ್ತೂರಿನಿಂದ ಎರಡು ಬಾರಿ ಸಂಸದರಾಗಿ, ಮಹಾರಾಷ್ಟ್ರ ರಾಜ್ಯಪಾಲರಾಗಿ ಸೇವೆ ಸಲ್ಲಿಸಿರುವ ಸಿ ಪಿ ರಾಧಾಕೃಷ್ಣನ್ ಹಿಂದುಳಿದ ವರ್ಗಗಳ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್ ಡಿ ಎ ಮೈತ್ರಿಕೂಟ ಹಿಂದುಳಿದ ವರ್ಗಗಳ ನಾಯಕರನ್ನು ಉಪರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ದೇಶದ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಗೌರವ ಸಲ್ಲಿಸಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ರಾಜ್ಯ ಸಭಾ ಸದಸ್ಯರಾದ ಡಾ. ಕೆ. ಲಕ್ಷ್ಮಣ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ವಿನೋದ್ ತಾವ್ಡೆ, ಉತ್ತರ ಪ್ರದೇಶದ ಸಚಿವರಾದ ಶ್ರೀ ನರೇಂದ್ರ ಕುಮಾರ್ ಕಶ್ಯಪ್ ಮೊದಲಾದವರು ಉಪಸ್ಥಿತರಿದ್ದರು.


Spread the love