ಎಬಿವಿಪಿ ವತಿಯಿಂದ “ಸೆಲ್ಫಿ ವಿತ್ ಡ್ರಗ್ಸ್ ಫ್ರೀ ಕ್ಯಾಂಪಸ್” ಅಭಿಯಾನ.

Spread the love

ಎಬಿವಿಪಿ ವತಿಯಿಂದ “ಸೆಲ್ಫಿ ವಿತ್ ಡ್ರಗ್ಸ್ ಫ್ರೀ ಕ್ಯಾಂಪಸ್” ಅಭಿಯಾನ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಳೆದ 69 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲಿ ಕಾರ್ಯನಿರ್ವಹಿಸುತ್ತಿದೆ. ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂದಿನ ವಿದ್ಯಾರ್ಥಿ- ಇಂದಿನ ಪ್ರಜೆಯೆಂಬ ಕಲ್ಪನೆಯೊಂದಿಗೆ ಕಾಲೇಜು ಕ್ಯಾಂಪಸ್‍ಗಳಲ್ಲಿ ವಿದ್ಯಾರ್ಥಿ ನಾಯಕತ್ವವನ್ನು ನೀಡುತ್ತಿದೆ. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಜಾಗೃತಗೊಳಿಸಿ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಪ್ರಯತ್ನ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಶೈಕ್ಷಣಿಕ, ಸಾಮಾಜಿಕ ಮತ್ತು ರಾಷ್ಟ್ರೀಯ ಸಮಸ್ಯೆಗಳ ವಿರುದ್ಧ ನಿರಂತರವಾದ ಯಶಸ್ವಿ ಹೋರಾಟಗಳನ್ನು ಕಟ್ಟಿ ವಿದ್ಯಾರ್ಥಿಗಳ ನಡುವೇ ಜಾಗೃತಿ ಮೂಡಿಸುತ್ತಿದೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜುಲೈ 30 ರಿಂದ 04 ಅಗಷ್ಟ 2018 ರವರೆಗೆ 6 ದಿನಗಳ ಕಾಲ ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಜಾಗೃತಿ ಮೂಡಿಸುವ ಸಲುವಾಗಿ “ಸೆಲ್ಫಿ ವಿತ್ ಕ್ಯಾಂಪಸ್” ಅಭಿಯಾನ ನಡೆಸುತ್ತಿದೆ. ಅದರ ಭಾಗವಾಗಿ ಎಬಿವಿಪಿ ಮಂಗಳೂರು ವತಿಯಿಂದ ಮಾದಕ ವ್ಯಸನದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ಸೆಲ್ಫಿ ವಿತ್ ಡ್ರಗ್ಸ್ ಫ್ರೀ ಕ್ಯಾಂಪಸ್” ಅಭಿಯಾನ ಕೂಡ ನಡೆಸಲಾಗುತ್ತಿದೆ. ಈ ಅಭಿಯಾನದಲ್ಲಿ ಎಬಿವಿಪಿಯಿಂದ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು.

ಶಿಕ್ಷಣ ಮತ್ತು ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ದೇಶದಲ್ಲಿ ಹೆಸರು ಮಾಡಿರುವ ಮಂಗಳೂರು ಇತ್ತಿಚಿನ ದಿನಗಳಲ್ಲಿ ಮಂಗಳೂರು ನಗರ ಹಾಗೂ ಜಿಲ್ಲೆಯ ಇತರೆ ಭಾಗಗಳ ಕಾಲೇಜು ಕ್ಯಾಂಪಸ್‍ಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗುತ್ತಿದೆ. ಎಲ್ಲಾ ವರ್ಗದ ವಿದ್ಯಾರ್ಥಿಗಳು, ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಡ್ರಗ್ಸ್‍ಗೆ ದಾಸರಾಗುತ್ತಿದ್ದು. ನಮ್ಮ ಸರ್ಕಾರಗಳು ಮಾದಕ ವ್ಯಸನದ ಭೂಗತ ದೊರೆಗಳ(ಡ್ರಗ್ ಮಾಫಿಯಾ) ವಿರುದ್ದ ಯಾವದೇ ಕಠಿಣ ಕ್ರಮ ಕೈಗೊಳ್ಳದಿರುವುದು, ದೇಶದ ಭವಿಷ್ಯತ್ತಿಗೆ ಸವಾಲಾಗುತ್ತಿದೆ. ಎಬಿವಿಪಿಯು ಮಂಗಳೂರಿನಲ್ಲಿರುವ ಕಾಲೇಜು ವಿದ್ಯಾರ್ಥಿಗಳೊಂದಿಗೆ ಕ್ಯಾಂಪಸ್‍ಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಮೂಲಕ ಅಲ್ಲಿನ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.

ಮೃಣಾಲ ಶೆಟ್ಟಿ, ಮಹಾನಗರ ಕಾರ್ಯದರ್ಶಿ, ಅಭಾವಿಪ, ಮಂಗಳೂರು


Spread the love