ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಬಂಧನ

ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಬಂಧನ

ಮಂಗಳೂರು: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪರಂಗಿಪೇಟೆ, ಮಾರಿಪಳ್ಳ ನಿವಾಸಿ ಜಬ್ಬಾರ್ ಯಾನೆ ಮಾರಿಪಳ್ಳ ಜಬ್ಬಾರ್ (42) ಎಂದು ಗುರುತಿಸಲಾಗಿದೆ.

2017 ಸಪ್ಟೆಂಬರ್ 26ರಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದ ಜಿಯಾ ಮತ್ತು ಫಯಾಝ್ ಎಂಬವರುಗಳ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ವೃತ್ತ ನಿರೀಕ್ಷಕರವರು ಹಾಗೂ ಸಿಬ್ಬಂದಿಗಳು ಮಂಗಳೂರಿನ ಕಂಕನಾಡಿಯಲ್ಲಿ ವಶಕ್ಕೆ ಪಡೆದಿದ್ದು ಮುಂದಿನ ಕಾನೂನು ಕ್ರಮಕ್ಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿರುತ್ತದೆ.

Leave a Reply

  Subscribe  
Notify of