ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ – ಸಂಸದ ನಳಿನ್ ಕುಮಾರ್ ಕಟೀಲ್

ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ – ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು: ರೈತರು, ಮೀನುಗಾರರು, ಉದ್ದಿಮೆದಾರರ ಸಹಿತ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಮಂಡನೆಯಾಗಿದೆ. ದೇಶದ ಜನತೆಯ ನಿರೀಕ್ಷೆಗೆ ತಕ್ಕಂತೆ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ನಡೆದಿದೆ. ಎಂದು ಸಂಸದ ನಳಿನ್ ಕುಮಾರ್ ಹೇಳಿದ್ದಾರೆ

ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಸಬಲೀಕರಣಕ್ಕೆ ವಿಶೇಷ ಆದ್ಯತೆ ಕಲ್ಪಿಸಿದ್ದಾರೆ. ಪ್ರಧಾನ ಮಂತ್ರಿ ಮತ್ಸೃ ಸಂಪದ ಯೋಜನೆ ಕರಾವಳಿಯ ಮೀನುಗಾರರಿಗೆ ವರದಾನವಾಗಲಿದೆ. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಹಂತ 3 ರಲ್ಲಿ 80,250 ಕೋಟಿ ರೂ. ವೆಚ್ಚದಲ್ಲಿ 1 ಲP್ಷÀದ 25 ಸಾವಿರ ಕಿ.ಮೀ. ರಸ್ತೆ ಮೇಲ್ದರ್ಜೆಗೇರಲಿದ್ದು, ಜಿಲ್ಲೆಯ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ದಿ ಸಾಧ್ಯವಾಗಲಿದೆ. 10 ಸಾವಿರ ರೈತ ಉತ್ಪಾದಕ ಸಂಸ್ಥೆಗಳ ಸ್ಥಾಪನೆ, 2024ರ ವೇಳೆಗೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಶುದ್ಧ ಕುಡಿಯುವ ನೀರು ಒದಗಿಸಲು ಹರ್ಘಥರ್ ಜಲ್ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 1.95 ಕೋಟಿ ಮನೆಗಳ ನಿರ್ಮಾಣ, 2022ರ ವೇಳೆಗೆ ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೆ ವಿದ್ಯುತ್ ಮತ್ತು ಎಲïಪಿಜಿ ಸಂಪರ್ಕ ಎಲ್ಲವೂ ದೇಶದ ಸರ್ವಾಂಗೀಣ ಅಭಿವೃದ್ದಿಗೆ ಕೈಗೊಂಡ ದಿಟ್ಟ ಕ್ರಮಗಳಾಗಿದೆ. ಮೂಲ ಸೌಕರ್ಯಕ್ಕೆ ಅತಿ ಹೆಚ್ಚು ಆದ್ಯತೆ ನೀಡಿರುವುದು, ಖಾಸಗಿ ಸಹಭಾಗಿತ್ವದಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವುದು ಸ್ವಾಗತಾರ್ಹ .